ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ (70) ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊದರಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಸದ್ಯ ಅವರು ಕನ್ನಡ ಕಿರುತೆರೆಯ ಧಾರಾವಾಹಿ ಪ್ರೇಮಲೋಕದಲ್ಲಿ ಅಭಿನಯಿಸುತ್ತಿದ್ದರು. ಗಂಗಾಧರಯ್ಯ ಅವರಿಗೆ ಶೂಟಿಂಗ್ ನಲ್ಲಿ ಇದ್ದ ಸಮಯದಲ್ಲಿಯೇ ಜ್ವರ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಕಲಿಸಲಾಗಿತ್ತು.
ನಾಟಕಲೋಕದಲ್ಲಿ ತಮ್ಮ ಪಯಣವನ್ನು ಪ್ರಾರಂಭಿಸಿದ ಇವರು 118 ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಲವಾರು ಧಾರಾವಾಹಿಯಲ್ಲಿ ಪೋಷಕ ನಟರಾಗಿ ಅಭಿನಯಿಸಿದ್ದಾರೆ. 1500 ಅಧಿಕ ನಾಟಕಗಳಲ್ಲಿ ಪಾತ್ರ ನಿರ್ವಹಿಸಿದ ಇವರ ಚೋಮ, ಆಸ್ಪೋಟ, ಚಿರಸ್ಮರಣೆ ಇವು ಕೆಲವು ಪ್ರಸಿದ್ಧ ನಾಟಕಗಳಾಗಿವೆ.
ಜಾಹಿರಾತು