ಬೆಂಗಳೂರು: ಡ್ರಗ್ಸ್ ಪ್ರಾಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೋಲಿಸರ ಅಥಿತಿಯಾಗಿರುವ ಸ್ಯಾಂಡಲ್ ವುಡ್ ನಟಿ ಸಂಜನಾಗೆ ಇಂದೂ ಸಹ ಜಾಮೀನು ಸಿಗಲಿಲ್ಲ. ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಎನ್ ಡಿ ಪಿ ಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು 19 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಈ ಮೂಲಕ ಮತ್ತೊಮ್ಮೆ ಸಿಸಿಬಿ ಪೋಲಿಸರ ವಶದಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಹೋಗಬೇಕಾದ ಪರಿಸ್ಥಿತಿ ಒದಗಿದೆ. ಈ ಹಿಂದೆ ಒಂದನೇ ಎಸಿಎಂಎಂ ನ್ಯಾಯಾಲಯ ಸಂಜನಾ ಅವರಿಗೆ ಎರಡು ದಿನಗಳ ಕಾಲ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿತ್ತು. ಇದಲ್ಲದೇ ಈ ಪ್ರಖರಣವನ್ನು ಎನ್ ಡಿ ಪಿ ಎಸ್ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿತ್ತು.
ಆದರೆ ಇಂದು ವಿಚಾರಣೆ ನಡೆಸಿದ ಎನ್ ಡಿ ಪಿ ಎಸ್ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿಯ ವಿಚಾರಣೆಯನ್ನು 19 ಕ್ಕೆ ಮುಂದೂಡಿರುವುದರಿಂದ ಇನ್ನೊಂದು ದಿನ ಕಾಯಲೇ ಬೇಕಾದ ಪರಿಸ್ಥಿತಿ ಉಂಟಾಗಿದೆ.