sandalwood-famous-actor-dr-rajkumars-son-puneet-rajkumar-is-no-more

ಬೆಂಗಳೂರು: ಕನ್ನಡದ ಖ್ಯಾತ ಪ್ರತಿಭಾವಂತ ನಟ ಡಾ. ರಾಜ್ ಕುಮಾರ್ ಅವರ ಪುತ್ರ ಪುನೀತ್ ರಾಜ್ ಕುಮಾರ್ ಅವರು ಶುಕ್ರವಾರ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 46 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುನೀತ್ ರಾಜ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದು ಕುಟುಂಬಸ್ಥರು, ಅಸಂಖ್ಯಾತ ಅಭಿಮಾನಿಗಳು ಶೋಕಸಾಗರದಲ್ಲಿ ಮುಳುಗಿದ್ದಾರೆ.

ಇಂದು ನಸುಕಿನ ಜಾವ ಎಂದಿನಂತೆ ಜಿಮ್ ನಲ್ಲಿ ದೇಹ ಕಸರತ್ತು ನಡೆಸುತ್ತಿದ್ದ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ರಮಣಶ್ರೀ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತರಲಾಯಿತು. ಆಗ ಆಸ್ಪತ್ರೆಯಲ್ಲಿ ತೀವ್ರ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದ ಅವರನ್ನು ವಿಕ್ರಂ ಆಸ್ಪತ್ರೆಗೆ ವರ್ಗಾಯಿಸಲಾಯಿತು.

ಪುನೀತ್ ಅವರನ್ನು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಅಸುನೀಗಿದ್ದು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆಘಾತವಾಗಿದೆ. ಪುನೀತ್ ಅವರ ನಿಧನ ಸುದ್ದಿ ಕೇಳುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಚಿತ್ರರಂಗದ ಗಣ್ಯರು, ಅಸಂಖ್ಯಾತ ಅಭಿಮಾನಿಗಳು ಆಸ್ಪತ್ರೆಯತ್ತ ದೌಡಾಯಿಸಿದರು.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here