ಸ್ಯಾಂಡಲ್ ವುಡ್ ನ ಹಿರಿಯ ನಟಿ ಬಿ. ಜಯಾ ಇನ್ನಿಲ್ಲ

sandalwood-senior-actress-b-jaya-passes-away-bengaluru

ಬೆಂಗಳೂರು (ಜೂ. 3) : ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಹಿರಿಯ ನಟಿ ಬಿ. ಜಯಾ (75) ಅವರು ನಿಧನರಾಗಿದ್ದಾರೆ. ಸುಮಾರು ಮುನ್ನೂರಕ್ಕೂ ಹೆಚ್ಚು ಚಿತ್ರದಲ್ಲಿ ಅಭಿನಯಿಸಿದ್ದ ಹಿರಿಯ ಕಲಾವಿದೆ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದರು.

“ಭಕ್ತ ಪ್ರಹ್ಲಾದ” (1958) ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಇವರು, ಬಾಲಕೃಷ್ಣ, ನರಸಿಂಹರಾಜು, ದ್ವಾರಕೀಶ್ ಸೇರಿದಂತೆ ಹಿರೀಯ ಕಲಾವಿದರ ಜೊತೆಯಲ್ಲಿ ಅಭಿನಯಿಸಿದ್ದರು. ವಿಧಿ ವಿಲಾಸ, ಬೆಳ್ಳಿಮೋಡ, ನ್ಯಾಯವೇ ದೇವರು, ಮಣ್ಣಿನ ಮಗ, ಶ್ರೀಕೃಷ್ಣ ದೇವರಾಯ, ದೇವರು ಕೊಟ್ಟ ತಂಗಿ, ಗಂಧದ ಗುಡಿ, ಶುಭಮಂಗಳ, ದಾರಿತಪ್ಪಿದ ಮಗ ಇವು ಬಿ ಜಯಾ ಅವರು ನಟಿಸಿರುವ ಕೆಲವು ಪ್ರಮುಖ ಚಿತ್ರಗಳು. ಇದಲ್ಲದೆ ಅನೇಕ ಧಾರಾವಾಹಿಗಳಲ್ಲಿ ಅಭಿನಯಿಸಿ ಕನ್ನಡಿಗರ ಮನ ಗೆದ್ದಿದ್ದರು.

ಇವರ ಸಾಧನೆಗೆ ಗೌಡ್ರು ಚಿತ್ರದಲ್ಲಿನ ಅಭಿನಯಕ್ಕೆ ಅತ್ಯತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿ, ಇನ್ನು 2012 ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, ಕನ್ನಡ ಟೆಲಿವಿಷನ್ ಅಸೋಸಿಯೇಷನ್ ಗೌರವ ಸೇರಿದಂತೆ ಹಲವಾರು ಪ್ರಶಸ್ತಿ ಗೌರವಗಳು ಇವರನ್ನು ಅರಸಿ ಬಂದಿವೆ.

 

LEAVE A REPLY

Please enter your comment!
Please enter your name here