ನವದೆಹಲಿ: ಟೆನಿಸ್ ಲೋಕದ ತಾರೆ ಸಾನಿಯಾ ಮಿರ್ಜಾ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಹೇಳಲಿದ್ದಾರೆ. ಈ ಕುರಿತು ಅವರು ಮಾಹಿತಿ ಹಂಚಿಕೊಂಡಿದ್ದು, ಜನವರಿ 16 ರಿಂದ ನಡೆಯಲಿರುವ ಆಸ್ಟ್ರೇಲಿಯಾ ಓಪನ್ ಟೆನಿಸ್ ಪಂದ್ಯಾವಳಿಯೇ ಅಂತಿಮ ಟೂರ್ನಿಯಾಗಿರಲಿದೆ.
ಫೆಬ್ರವರಿಯಲ್ಲಿ ವಿದಾಯ ಘೋಷಿಸುವ ಸಾಧ್ಯತೆಯಿದೆ ಎಂದು ಈ ಮೊದಲು ಹೇಳಿದ್ದರು, ಆದರೆ ಅದಕ್ಕೂ ಮುನ್ನ ಅಂದರೆ ಜನವರಿ 16 ರಿಂದ ನಡೆಯಲಿರುವ ಆಸ್ಟ್ರೇಲಿಯಾ ಓಪನ್ ಟೆನಿಸ್ ಪಂದ್ಯಾವಳಿಯೇ ಅಂತಿಮ ಟೂರ್ನಿ ಎಂದು ಸಾಮಾಜಿಕ ತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
2005ರ ಗ್ರಾಂಡ್ ಸ್ಲಾಮ್ ಪಂದ್ಯಾವಳಿಯ ಮೂಲಕ ತಮ್ಮ ಪ್ರಯಾಣವನ್ನು ಆರಂಭಿಸಿದ್ದರು. ಟೆನಿಸ್ ಲೋಕದಲ್ಲಿ ಮರೆಯಲಾಗದ ಆಟಗಾರ್ತಿಯಾಗಿ ಮಿಂಚಿ, ಹಲವು ಪ್ರಶಸ್ತಿಗಳನ್ನು ಭಾರತಕ್ಕೆ ತಂದುಕೊಟ್ಟಿದ್ದರು.
Life update 🙂 pic.twitter.com/bZhM89GXga
— Sania Mirza (@MirzaSania) January 13, 2023
“ನನ್ನ ವೃತ್ತಿಪರ ವೃತ್ತಿಜೀವನದ ಕಳೆದ 20 ವರ್ಷಗಳಲ್ಲಿ ಸಾಧಿಸಲು ಸಹಾಯ ಮಾಡಿದ ಪ್ರಯೊಬ್ಬರಿಗೂ ಧನ್ಯವಾದ” ಹೇಳಿ ಬಾವುಕ ಪಾತ್ರವನ್ನು ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಅಭಿಮಾನಿಗಳೊಂದಿಗೆ ತಮ್ಮ ವಿದಾಯದ ವಿಚಾರವನ್ನು ಸಾನಿಯಾ ಬಹಿರಂಗ ಮಾಡಿದ್ದಾರೆ.
ಇದನ್ನೂ ಓದಿರಿ: ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ