ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಅಪ್ರೆಸೆಂಟ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದು, ಅರ್ಹ ಹಾಗು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 26 ಕೊನೆಯ ದಿನವಾಗಿದ್ದು, ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಬಾರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 6100 ಅಪ್ರೆಸೆಂಟ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯನ್ನು ಸಹ ನೀಡಲಿದೆ. ಅಭ್ಯರ್ಥಿಗಳ ಆಯ್ಕೆಗಾಗಿ ಲಿಖಿತ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ.
ಹುದ್ದೆಗಳ ವಿವರ :
ದೇಶದಾದ್ಯಂತ ಒಟ್ಟು 6100 ಅಪ್ರೆಸೆಂಟ್ ಹುದ್ದೆಗಳು
ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವವರು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.
ವಯೋಮಿತಿ:
ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗೆ ಕನಿಷ್ಠ 20 ವರ್ಷ ಮತ್ತು ಗರಿಷ್ಟ 28 ವರ್ಷಗಳ ವಯೋಮಿತಿ ನಿಗದಿಗೊಳಿಸಲಾಗಿದೆ.
ವೇತನ ಶ್ರೇಣಿ:
ಅಪ್ರೆಸೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15,000/- ವೇತನ ನಿಗದಿಗೊಳಿಸಲಾಗಿದೆ.
ಅರ್ಜಿ ಸಲ್ಲಿಕೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರವಾಗಿ ಆನ್ ಲೈನ್ ಮೂಲಕ https://sbi.co.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ – 06 ಜುಲೈ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 26 ಜುಲೈ 2021
ಇದನ್ನೂ ಓದಿರಿ: ಗಡಿ ಭದ್ರತಾ ಪಡೆಯ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ