sc-grants-interim-bail-to-arnab-2-others

ನವದೆಹಲಿ: ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಡಿಸೈನರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

2018 ರಲ್ಲಿ ಡಿಸೈನರ್ ಒಬ್ಬರಿಗೆ ಆತ್ಮಹತ್ಯೆಗೆ ಪ್ರಚೋದಿಸಿದ್ದರು ಎನ್ನುವ ಆರೋಪದ ಮೇಲೆ ಮುಂಬೈ ಪೊಲೀಸರಿಂದ ಬಂಧಿತರಾಗಿದ್ದ ಅರ್ನಬ್ ಗೋಸ್ವಾಮಿ ಹಾಗೂ  ಮತ್ತಿಬ್ಬರಿಗೆ ತಲಾ 50,000 ರೂ ಗಳ  ವಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಿದೆ. ಇಂದು ನ್ಯಾಯಮೂರ್ತಿ ಚಂದ್ರಚೂಡ್ ಅವರ ನೇತೃತ್ವದ ನ್ಯಾಯಪೀಠವು ಈ ತೀರ್ಪನ್ನು ನೀಡಿದ್ದು, ತಕ್ಷಣವೇ ಆದೇಶ ಜಾರಿಗೆ ತರುವಂತೆ ನಿರ್ದೇಶನ ನೀಡಿದೆ.

ಕಳೆದ ಸೋಮವಾರ ಅರ್ನಬ್ ಗೋಸ್ವಾಮಿ ಹಾಗೂ ಇತರರು ಮಧ್ಯಂತರ ಜಾಮೀನು ನೀಡಬೇಕೆಂದು ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕೋರ್ಟ್ ಜಾಮೀನನ್ನು ನಿರಾಕರಿಸಿ, ಕೆಳಹಂತದ ನ್ಯಾಯಾಲಯದಲ್ಲಿ ಈ ಕುರಿತಂತೆ ದಾವೆ ಹೂಡಲು ಸೂಚಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಜಯಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

LEAVE A REPLY

Please enter your comment!
Please enter your name here