sc-upholds-the-rights-of-travanceore-royal-family-sree-padmanabha-swami-temple

ನವದೆಹಲಿ:  ಕೇರಳದ ತಿರುವನಂತಪುರಮ್ ನ ಪ್ರಸಿದ್ಧ ಅನಂತ ಪದ್ಮನಾಭ ಸ್ವಾಮಿ ದೇಗುಲದ ಆಡಳಿತದ ಹಕ್ಕು ತಿರುವಾಂಕೂರು ರಾಜ ಮನೆತನಕ್ಕೆ ಸೇರಿದ್ದು, ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಯು ಯು ಲಲಿತ್ ಮತ್ತು ಇಂಧು ಮಲ್ಹೋತ್ರ ಅವರನ್ನೊಳಗೊಂಡ ವಿಭಾಗೀಯ ಪೀಠ ಇಂದು ಈ ತೀರ್ಪನ್ನು ನೀಡಿ ಆದೇಶಿಸಿದೆ. ದೇವಾಲಯದಲ್ಲಿ ರಾಜಮನೆತನದ ಆಡಳಿತದ ಕುರಿತಂತೆ ಗೋಪಾಲ ಸುಬ್ರಹ್ಮಣ್ಯಂ ಎನ್ನುವವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಕೇರಳ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದಿತ್ತು. ಅಂದು ರಾಜಮನೆತನದ ವಿರುದ್ಧ ತೀರ್ಪು ಬಂದ ಹಿನ್ನೆಲೆಯಲ್ಲಿ ರಾಜಮನೆತನದ ಕಾನೂನು ಪ್ರತಿನಿಧಿಗಳು ಸೇರಿದಂತೆ ಹಲವರು ಸುಪ್ರೀಂ ಕೋರ್ಟ್ ಮೊರೆಹೊಗಿದ್ದರು.

ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ರಾಜ್ಯ ಸರಕಾರ

ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸರಕಾರ ಸ್ವಾಗತಿಸುತ್ತದೆ. ಈ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಯಾವುದೇ ವಿಚಾರಕ್ಕೆ ಕೈ ಹಾಕುವುದಿಲ್ಲ. ನ್ಯಾಯಾಲಯದ ತೀರ್ಪಿಗೆ ತಲೆಬಾಗಿದ್ದೇವೆ ಎಂದು ಕೇರಳ ಸರಕಾರದ ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ಅವರು ತಿಳಿಸಿದ್ದಾರೆ.

ಸುಪ್ರೀಂ ತೀರ್ಪಿಗೆ ಹರ್ಷ ವ್ಯಕ್ತಪಡಿಸಿದ ರಾಜಮನೆತನ

ಸುಪ್ರೀಂ ಕೋರ್ಟ್ ತೀರ್ಪನ್ನು ಖುಷಿಯಿಂದಲೇ ಸ್ವಾಗತಿಸಿರುವ ರಾಜಮನೆತನ, ದೇವಾಲಯದ ಸಂಪತ್ತು ದೇವರಿಗೆ ಸೇರಿದ್ದು, ರಾಜಮನೆತನದ್ದಲ್ಲ ಎಂದು ಹೇಳಿದ್ದಾರೆ. ಈ ತೀರ್ಪಿನಿಂದಾಗಿ ಪದ್ಮನಾಭ ಸ್ವಾಮಿ ದೇವಾಲಯದೊಂದಿಗೆ ರಾಜಮನೆತನದ ಸಂಬಂಧ ಇನ್ನಷ್ಟು ಗಟ್ಟಿಯಾಗಲಿದೆ ಎಂದು ತಿಳಿಸಿದ್ದಾರೆ.

ಲಕ್ಷಾಂತರ ಕೋಟಿ ರೂಪಾಯಿಗಳ ಸಂಪತ್ತು ಪತ್ತೆ

ದೇವಾಲಯದಲ್ಲಿ  ಲಕ್ಷಾಂತರ ಕೋಟಿಯ ಸಂಪತ್ತು ಪತ್ತೆಯಾದ ಹಿನ್ನೆಲೆಯಲ್ಲಿ 2014 ರಲ್ಲಿ ಸುಪ್ರೀಂ ಕೋರ್ಟ್ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ವಿನೋದ್ ರಾಯ್ ಅವರ ಮೇಲ್ವಿಚಾರಣೆಯಲ್ಲಿ ದೇವಾಲಯದ ಸಂಪತ್ತಿನ ಶೋಧನೆಯನ್ನು ನಡೆಸಲು ಆದೇಶಿಸಿತ್ತು. ಈ ತಂಡ ನಡೆಸಿದ ಸಂಶೋಧನೆಯಲ್ಲಿ ಲಕ್ಷಾಂತರ ಕೋಟಿಯ ದೇವಾಲಯದ ಸಂಪತ್ತು ಪತ್ತೆಯಾಗಿತ್ತು.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here