ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ (Mandeep Roy) ಅವರಿಗೆ ಹೃದಯಾಘಾತ ಸಂಭವಿಸಿದೆ. ಮೂರು ದಿನಗಳ ಹಿಂದೆ ಹಾರ್ಟ್ ಅಟ್ಯಾಕ್ ಆಗಿದ್ದು, ಅವರನ್ನು ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕನ್ನಡ ಚಿತ್ರರಂಗದಲ್ಲಿ 500 ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟ ಮನ್ದೀಪ್ ರಾಯ್ ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದಾರೆ. ನೂರಾರು ಹಾಸ್ಯ ಪಾತ್ರಗಳ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಅನಂತ್ ನಾಗ್, ಶಂಕರ್ ನಾಗ್, ಡಾ. ರಾಜ್ಕುಮಾರ್ ಸೇರಿದಂತೆ ಅನೇಕ ದಿಗ್ಗಜ ನಟರ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ಖ್ಯಾತಿ ಅವರಿಗಿದೆ.
ಇದನ್ನೂ ಓದಿರಿ: ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು
ಅವರ ಚಿಕಿತ್ಸೆಗೆ ಹಣಕಾಸಿನ ತೊಂದರೆ ಉಂಟಾಗಿದೆ. ಆರ್ಥಿಕ ನೆರವಿನ ಅವಶ್ಯಕತೆ ಇದೆ ಎಂಬುದು ತಿಳಿದುಬಂದಿದೆ. ಮನ್ದೀಪ್ ರಾಯ್ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಇದನ್ನೂ ಓದಿರಿ: ಲಾಲು ಪ್ರಸಾದ್ ಯಾದವ್ಗೆ ಮಗಳ ಕಿಡ್ನಿ ಕಸಿ – ಶಸ್ತ್ರಚಿಕಿತ್ಸೆ ಯಶಸ್ವಿ