ಸಿದ್ದೇಶ್ವರಶ್ರೀ ಗಂಜಿ ಸೇವಿಸಿದ್ದಾರೆ, ಆರೋಗ್ಯ ಸ್ಥಿರವಾಗಿದೆ: ವೈದ್ಯರ ಸ್ಪಷ್ಟನೆ

siddeshwara-swamijis-health-condition-is-serious

ವಿಜಯಪುರ: ಸಿದ್ದೇಶ್ವರಶ್ರೀಗಳು ಆಹಾರ ಸೇವಿಸಲಾಗದೆ ಸಹಜವಾಗಿ ಅಶಕ್ತರಾಗಿದ್ದಾರೆ. ಇದಲ್ಲದೇ ಅವರ ಆರೋಗ್ಯ ಸ್ಥರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ಮಾಹಿತಿ ನೀಡಿದ್ದಾರೆ.

ಸಿದ್ದೇಶ್ವರಶ್ರೀಗಳ ಉಸಿರಾಟ, ನಾಡಿ ಬಡಿತ, ರಕ್ತದ ಒತ್ತಡ ಸಹಜ ಸ್ಥಿತಿಯಲ್ಲಿದೆ. ಕಳೆದ ಕೆಲ ದಿನಗಳಿಂದ ಆಹಾರ ಸೇವಿಸದ ಕಾರಣ ಸಹಜವಾಗಿಯೇ ಅಶಕ್ತತೆ ಕಾಡುತ್ತಿದೆ. ಈ ಕಾರಣದಿಂದಾಗಿ ಭಾನುವಾರ ಹೊರಗೆ ಕಾಣಿಸಿಕೊಂಡಿಲ್ಲ. ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಡಾ. ಮಲ್ಲಣ್ಣ ಮೂಲಿಮನಿ ಹಾಗೂ ಡಾ. ಅರವಿಂದ ಪಾಟೀಲ್ ಮಾಹಿತಿ ನೀಡಿದ್ದಾರೆ.

ಶನಿವಾರ ಶ್ರೀಗಳಿಗೆ ಆಕ್ಸಿಜನ್ ಮಟ್ಟ ಕಡಿಮೆಯಾಗಿತ್ತು. ಆದರೆ ಅದು ಈಗ ಸಹಜವಾಗಿದೆ. ಸಿದ್ದೇಶ್ವರಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು, ಭಕ್ತರು ಆತಂಕಗೊಳ್ಳುವ ಅವಶ್ಯಕತೆಯಿಲ್ಲ ಎಂದು ಆಸ್ಪತ್ರೆ ಮೂಲಗಳು ಸ್ಪಷ್ಟಪಡಿಸಿವೆ.

ಇದನ್ನೂ ಓದಿರಿ: ಅಮೂಲ್ ಜೊತೆ ನಂದಿನಿ ವಿಲೀನ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ 

ಕೊರೋನಾ ಸಂಕಷ್ಟ ಮತ್ತು ಅಧಿಕ ಸಂಖ್ಯೆಯಲ್ಲಿ ಸಾರ್ವಜನಿಕರ ಆಗಮನ ಹಿನ್ನೆಲೆಯಲ್ಲಿ ಭದ್ರತೆ ನೀಡುವುದು ಅವಶ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪೋಲೀಸರ ನಿಯೋಜನೆಯನ್ನು ಹೆಚ್ಚಿಸಲಾಗಿದೆ. ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲ ಸಲ್ಲದ ಸುದ್ದಿಗಳನ್ನು ಹರಿಬಿಡುತ್ತಿದ್ದು, ಈ ಸಂದೇಶಗಳನ್ನು ನೋಡಿ ಭಕ್ತರು ಆತಂಕಗೊಳ್ಳುವ ಅವಶ್ಯಕತೆ ಇಲ್ಲ ಎಂದು ಮಾಹಿತಿ ನೀಡಲಾಗಿದೆ.

LEAVE A REPLY

Please enter your comment!
Please enter your name here