ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು ಅವರ ದರ್ಶನ ಪಡೆಯಲು ಲಕ್ಷೋಪಾದಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.
ಸಿದ್ಧೇಶ್ವರ ಶ್ರೀಗಳಿಗೆ ಸರ್ಕಾರಿ ಸಕಲ ಗೌರವ ಸಲ್ಲಿಸಲು ನಿರ್ಧರಿಸಲಾಗಿದೆ. ಇನ್ನು ಶಿಷ್ಟಾಚಾರದಂತೆ ಸೂರ್ಯಾಸ್ತದ ಒಳಗೆ ಸರ್ಕಾರಿ ಗೌರವ ಸಲ್ಲಿಸಬೇಕಿದ್ದು ಹೀಗಾಗಿ ಸಂಜೆ 5.15ಕ್ಕೆ ಆರಂಭಗೊಳ್ಳಲಿದೆ. ಇನ್ನು ಲಕ್ಷೋಪಾದಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಸರ್ಕಾರಿ ಗೌರವ ಮುಗಿದ ಮೇಲೆಯೂ ಭಕ್ತರಿಗೆ ದರ್ಶನ ವ್ಯವಸ್ಥೆ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿರಿ: ರಾಜ್ಯದಲ್ಲಿ ಬಾಲ್ಯವಿವಾಹ ತಡೆಗೆ ಇನ್ನು ಮುಂದೆ ಮಹತ್ವದ ಕ್ರಮ !
ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಪಾಂಡಿತ್ಯಪೂರ್ಣ ತತ್ವಜ್ಞಾನಿಗಳ ದರ್ಶನ ಪಡೆದುಕೊಳ್ಳಲು ಲಕ್ಷೋಪಾದಿಯಲ್ಲಿ ಭಕ್ತರು ಬರುತ್ತಿದ್ದಾರೆ.
ಇದನ್ನೂ ಓದಿರಿ: ಮಾನವ ಕುಲದ ಮಹಾನ್ ಚೇತನ, ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿ