ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಗಾಯಕಿ ಮಂಗ್ಲಿ

singer-mangli-who-entered-sandalwood-as-a-heroine

ರಾಬರ್ಟ್ ಚಿತ್ರದ ಹಾಡನ್ನು ಹಾಡುವ ಮೂಲಕ ಕನ್ನಡ ಜನತೆಯ ಮೆಚ್ಚುಗೆಗೆ ಪಾತ್ರರಾದ ಗಾಯಕಿ ಮಂಗ್ಲಿ ಇದೀಗ ನಾಯಕಿಯಾಗಿ ಬಣ್ಣ ಹಚ್ಚಲಿದ್ದಾರೆ. ತೆಲುಗು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಸೂಪರ್ ಹಿಟ್ ಹಾಡುಗಳನ್ನು ಹಾಡಿರುವ ಚೆಲುವೆ ಮಂಗ್ಲಿ ಇದೀಗ ಪತ್ರಕರ್ತ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ ನಿರ್ದೇಶನದಲ್ಲಿ ಮೂಡಿ ಬರಲಿರುವ ‘ಪಾದರಾಯ’ ಚಿತ್ರದ ಮೂಲಕ ಮೊದಲಬಾರಿಗೆ ನಾಯಕಿಯಾಗಿ ಅಭಿನಯಿಸಲಿದ್ದಾರೆ.

ಇವರು ರಾಬರ್ಟ್, ದಿಪ್ ಪಸಂದ್, ವಿಕ್ರಾಂತ್ ರೋಣ, ತ್ರಿಬಲ್ ರೈಡಿಂಗ್, ವೇದ ಸೇರಿದಂತೆ ಹಲವು ಕನ್ನಡ ಚಿತ್ರಗಳಲ್ಲಿ ಹಾಡಿ ಕನ್ನಡಿಗರ ಮನಸ್ಸಿನಲ್ಲಿ ಅಚ್ಚಳಿಯದ ದ್ವನಿಯನ್ನು ಸೆಟ್ ಮಾಡಿದ್ದಾರೆ. ಇತ್ತೀಚಿಗೆ ತೆರೆಕಂಡ ಶಿವಣ್ಣ ಅಭಿನಯದ ವೇದ ಚಿತ್ರದಲ್ಲಿನ ‘ಗಿಲ್ಲಕ್ಕೋ..’ ಹಾಡಿನ ಮೂಲಕ ಸುದ್ದಿಯಲ್ಲಿದ್ದಾರೆ.

‘ಪಾದರಾಯ’ ಇದೊಂದು ನೈಜಘಟನೆ ಆಧಾರಿತ ಚಿತ್ರವಾಗಿದ್ದು, ನಾಗಶೇಖರ್ ಚಿತ್ರದ ನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರಕಥೆ, ಸಂಭಾಷಣೆ ಜೊತೆ ಜೊತೆಗೆ ನಿರ್ದೇಶಿಸುತ್ತಿರುವ ಚಂದ್ರಚೂಡ ಅವರು ನೈಜ ಘಟನೆಯೊಂದನ್ನು ಕಥೆಯಾಗಿಸುವ ಪ್ರಯತ್ನದಲ್ಲಿದ್ದಾರೆ. ವಿಶೇಷ ಕಥಾ ಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣವು ಸದ್ಯದಲ್ಲಿಯೇ ಆರಂಭವಾಗಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿರಿ: ಜನವರಿಯಲ್ಲೇ ಹಸೆಮಣೆ ಏರಲಿದ್ದಾರೆ ವಸಿಷ್ಠ ಸಿಂಹ, ಹರಿಪ್ರಿಯಾ

LEAVE A REPLY

Please enter your comment!
Please enter your name here