ಆಗ್ನೇಯ ರೈಲ್ವೆಯಲ್ಲಿ (South Eastern Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸ್ಪೋರ್ಟ್ಸ್ ಕೋಟಾ ಆಧಾರದಲ್ಲಿ ಒಟ್ಟು 21 ಸ್ಪೋರ್ಟ್ಸ್ ಪರ್ಸನ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.
ವಿದ್ಯಾರ್ಹತೆ:
ಆಗ್ನೇಯ ರೈಲ್ವೆ ನೇಮಕಾತಿಯ ಸ್ಪೋರ್ಟ್ಸ್ ಕೋಟಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ 10ನೇ ತರಗತಿ, 12 ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು. ಮತ್ತು ರಾಜ್ಯ ರಾಷ್ಟ್ರ ಮಟ್ಟದ ಕ್ರೀಡಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯ ಪ್ರಮಾಣ ಪತ್ರ ಹೊಂದಿರಬೇಕು.
ವಯೋಮಿತಿ:
ಆಗ್ನೇಯ ರೈಲ್ವೆ ನೇಮಕಾತಿಯ ಸ್ಪೋರ್ಟ್ಸ್ ಕೋಟಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 1, 2022 ಕ್ಕೆ 18-25 ವರ್ಷದೊಳಗಿರಬೇಕು. ವರ್ಗಗಳ ಆಧಾರದಲ್ಲಿ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.
ಅರ್ಜಿ ಶುಲ್ಕ:
ಆಗ್ನೇಯ ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸುವ ಎಸ್ ಸಿ /ಎಸ್ ಟಿ /ಮಹಿಳೆ/ಅಲ್ಪಸಂಖ್ಯಾತ ಅಭ್ಯರ್ಥಿಗಳ ಕುಟುಂಬದ ಆದಾಯವು ವಾರ್ಷಿಕ 50,000/- ಕ್ಕಿಂತ ಕಡಿಮೆ ಇದ್ದರೆ 250 ರೂ. ಹಾಗೂ ಇತರ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.
ಆಯ್ಕೆ ಪ್ರಕ್ರಿಯೆ:
ಆಗ್ನೇಯ ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ವೀಕೃತ ಅರ್ಜಿಯ ಆಧಾರದಲ್ಲಿ ಶಾರ್ಟ್ಲಿಸ್ಟಿಂಗ್ ಮಾಡಿ, ಕ್ರೀಡಾ ಪ್ರಯೋಗಗಳು, ಕ್ರೀಡಾ ಸಾಧನೆ ಮತ್ತು ಶೈಕ್ಷಣಿಕ ಅರ್ಹತೆಯ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ:
ಆಗ್ನೇಯ ರೈಲ್ವೆ ನೇಮಕಾತಿಯ ಸ್ಪೋರ್ಟ್ಸ್ ಕೋಟಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ತಾಣ https://www.rrcser.co.in ಗೆ ಭೇಟಿ ನೀಡಬಹುದು. ಅರ್ಹ ಅಭ್ಯರ್ಥಿಗಳು ಫೆಬ್ರವರಿ 2, 2022 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.
ಆಗ್ನೇಯ ರೈಲ್ವೆ ಇಲಾಖೆಯ ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ