south-western-railway-recruitment-2021

ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 90 ಕ್ಕೂ ಅಧಿಕ ಅಪ್ರೆಂಟಿಸ್ (ಶಿಶುಕ್ಷು) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಒಟ್ಟು ಹುದ್ದೆಗಳು:

ಒಟ್ಟು 90 ಕ್ಕೂ ಅಧಿಕ ಶಿಶುಕ್ಷು ಹುದ್ದೆಗಳ ಭರ್ತಿಗೆ ಅಧಿಸೂಚನೆ ಕರೆಯಲಾಗಿದೆ.

ವಯೋಮಿತಿ:

ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 15 ವರ್ಷಗಳು ಗರಿಷ್ಠ 24 ವರ್ಷಗಳು ತುಂಬಿರಬೇಕು. ನಿಯಮಗಳ ಪ್ರಕಾರ SC / ST / OBC / PWD ಅಭ್ಯರ್ಥಿಗಳಿಗೆ ವಯಸ್ಸಿನಲ್ಲಿ ಸಡಿಲಿಕೆ ಅನ್ವಯವಾಗುತ್ತದೆ.

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಜೊತೆಗೆ ಅದಕ್ಕೆ ಸಂಬಂಧಿಸಿದ ವಿಭಾಗದಲ್ಲಿ ( ITI ದಲ್ಲಿ ) ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು.

ಅರ್ಜಿ ಶುಲ್ಕ:

ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು ರೂಪಾಯಿ 100 ನ್ನು ಪಾವತಿಸಬೇಕು. SC / ST / PWBD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಪರೀಕ್ಷಾ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:

ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಮೆರಿಟ್ ಆಧಾರದ ಮೇಲೆ ಆಯ್ಕೆ ನಡೆಯಲಿದೆ.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 4 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 3 ನವೆಂಬರ್ 2021

ಈ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಅಧಿಸೂಚನೆಯಲ್ಲಿ ನೀಡಲಾಗಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಳ್ಳಲು ಕೋರಲಾಗಿದೆ.

ಅಧಿಸೂಚನೆ

ವೆಬ್ ಸೈಟ್ ಲಿಂಕ್ 

ನಮ್ಮನ್ನು ಪ್ರಮುಖ ತಾಣಗಳಲ್ಲಿ ಫಾಲೋ ಮಾಡಿ..

LEAVE A REPLY

Please enter your comment!
Please enter your name here