sp-balasubrahmanyam-says-hello-from-hospital

ಬೆಂಗಳೂರು : ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಕೆಲದಿನಗಳ ಹಿಂದೆ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರದಲ್ಲಿ ಅವರಿಗೆ ಜ್ವರ ಹಾಗೂ ಹಲವಾರು ಆರೋಗ್ಯ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ವೆಂಟಿಲೇಟರ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದು ಅವರ ಅಪಾರ ಅಭಿಮಾನಿಗಳಿಗೆ ಆತಂಕವನ್ನೂ ಉಂಟುಮಾಡಿತ್ತು.

ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು,  ತಮ್ಮ ಫೆಸ್ ಬುಕ್ ಪ್ರೊಫೈಲ್ ಗೆ ಪೋಟೋ ಹಾಕುವ ಮೂಲಕ ತಾವು ಆರೋಗ್ಯವಾಗಿ ಇರುವುದಾಗಿ ಸಂಜ್ಞೆಯ ಮೂಲಕ ತಿಳಿಸಿದ್ದಾರೆ. ಈ ಮೂಲಕ ಅವರ ಅಪಾರ ಅಭಿಮಾನಿಗಳಲ್ಲಿ ಸ್ವಲ್ಪಮಟ್ಟಿನ ಸಮಾದಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿರಿ: ಸ್ವಾತಂತ್ರ್ಯೋತ್ಸವದ ಸಂಭ್ರಮ: ಆತ್ಮೀಯತೇಯ ಬಂಧವೇ ಸ್ವಾತಂತ್ರ್ಯ…

ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಪುತ್ರ ತಮಿಳು ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ‘ ತಂದೆಯವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.

LEAVE A REPLY

Please enter your comment!
Please enter your name here