ವಿಜಯಪುರ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಈಗಿನ ಆರೋಗ್ಯ ಸ್ಥಿತಿ ಕುರಿತಂತೆ ವೈದ್ಯರು ಮತ್ತೊಮ್ಮೆ ಮಾಹಿತಿ ನೀಡಿದ್ದಾರೆ.
ಶ್ರೀಗಳ ಆರೋಗ್ಯ ಕುರಿತು ಮಾಹಿತಿ ನೀಡಿರುವ ವೈದ್ಯ ಡಾ. ಮಲ್ಲಣ್ಣ ಮೂಲಿಮನಿ, ಇಂದು ಬೆಳಗಿನಿಂದಲೂ ಶ್ರೀಗಳು ಯಾವುದೇ ಆಹಾರ ಸ್ವೀಕರಿಸಿಲ್ಲ. ಈ ಹಿನ್ನೆಲೆಯಲ್ಲಿ ನಾಡಿ ಮಿಡಿತ ಮತ್ತು ಬಿ ಪಿ ಯಲ್ಲಿ ಸ್ವಲ್ಪ ಏರು ಪೇರಾಗಿರುವುದು ಕಂಡುಬಂದಿದೆ. ಇದನ್ನು ಹೊರತುಪಡಿಸಿದರೆ ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿರಿ: ಮಾನವ ಕುಲದ ಮಹಾನ್ ಚೇತನ, ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿ
ಶ್ರೀಗಳು ಆಹಾರ ತೆಗೆದುಕೊಳ್ಳದ ಕಾರಣ ಸಹಜವಾಗಿ ನಿಶ್ಯಕ್ತಿ ಉಂಟಾಗಿದೆ. ಈ ಕಾರಣದಿಂದಾಗಿ ಅವರ ಆರೋಗ್ಯದಲ್ಲಿ ಸ್ವಲ್ಪಮಟ್ಟಿಗಿನ ಏರುಪೇರು ಕಂಡುಬಂದಿದೆ. ಅವರಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿದೆ. ಆದರೆ ವೆಂಟಿಲೇಟರ್ ಮೇಲೆ ಇರಿಸಿಲ್ಲ ಎಂದು ಹೇಳಿದ್ದಾರೆ. ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಹೊರಗಡೆ ತೆರಳಲು ಶ್ರೀಗಳು ನಿರಾಕರಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿರಿ: ರಾಜ್ಯದಲ್ಲಿ ಬಾಲ್ಯವಿವಾಹ ತಡೆಗೆ ಇನ್ನು ಮುಂದೆ ಮಹತ್ವದ ಕ್ರಮ !