2nd-puc-results-tentatively-on-july20-clarifies-minister-suresh-kumar

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷವಾದ ಪರೀಕ್ಷಾ ವಿಧಾನವನ್ನು ಅಳವಡಿಸಿಕೊಳ್ಳಲಾಗಿದ್ದು, ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ (SSLC Exam Timetable) ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದೆ.

ಇಂದು ಶಿಕ್ಷಣ ಸಚಿವ ಸುರೇಶ ಕುಮಾರ್ ಅವರು ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡುತ್ತಾ, “ಜುಲೈ 19 ರಂದು ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. ಜುಲೈ 22 ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ” ಎಂದು ಹೇಳಿದರು. ಈ ಬಾರಿ 8.76 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದು, 7306 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಈ ಬಾರಿ ಸರಳವಾಗಿ (SSLC Exam) ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ದಿನ ಗಣಿತ, ವಿಜ್ಞಾನ, ಸಮಾಜವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. 22 ರಂದು ಕನ್ನಡ, ಇಂಗ್ಲಿಷ್, ಹಿಂದಿ ಭಾಷೆಯ ಪರೀಕ್ಷೆಗಳು ನಡೆಯಲಿವೆ. ಪ್ರಶ್ನೆ ಪತ್ರಿಕೆಯಲ್ಲಿ ತಲಾ 40 ಅಂಕಗಳಂತೆ ಒಟ್ಟು 120 ಅಂಕಗಳು ಇರಲಿದ್ದು, ಎಲ್ಲವೂ ಬಹು ಆಯ್ಕೆಯ ಪ್ರಶ್ನೆಗಳಾಗಿರಲಿವೆ. ಉತ್ತರಗಳನ್ನು ಬರೆಯಲು ಪ್ರತ್ಯೇಕವಾದ ಓ ಎಂ ಆರ್ (OMR Sheet) ಶೀಟನ್ನು ನೀಡಲಾಗುವುದು.

ಇದನ್ನೂ ಓದಿರಿ: ವಿದ್ಯಾರ್ಥಿಗಳೇ ಗಮನಿಸಿ: ಎಸ್ಎಸ್ಎಲ್‌ಸಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಪರೀಕ್ಷಾ ಕೇಂದ್ರದಲ್ಲಿ ಪಾಲಿಸಬೇಕಾದ ನಿಯಮಗಳು:

ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುವ ಜುಲೈ 19 ಮತ್ತು ಜುಲೈ 22 ರಂದು ಕೇಂದ್ರದ 200 ಮೀ ಸುತ್ತಳತೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗುವುದು. ಈ ಬಾರಿ  ಜುಲೈ 19-22 ರಂದು ಬೆಳಗ್ಗೆ 10.30 ರಿಂದ 1.30 ರ ವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯದಲ್ಲಿ ಬಾಗಿಯಾಗುವ ಎಲ್ಲ ಅಧಿಕಾರಿಗಳು ಮತ್ತು ಶಿಕ್ಷಕರು ಕಡ್ಡಾಯವಾಗಿ ವ್ಯಾಕ್ಸಿನ್ ತೆಗೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

ಪರೀಕ್ಷಾ ಕೊಠಡಿಯಲ್ಲಿ ಅಧಿಕಾರಿಗಳು ಮತ್ತು ಶಿಕ್ಷಕರಿಗೆ N95 ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ಆದೇಶಿಸಲಾಗಿದೆ. ಆದರೆ ವಿದ್ಯಾರ್ಥಿಗಳಿಗೆ ಬಟ್ಟೆಯ ಮಾಸ್ಕನ್ನು ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಪರೀಕ್ಷೆಯ ದಿನ ಎಲ್ಲ ಸಿಬ್ಬಂದಿಗಳೂ ಬೆಳಗ್ಗೆ 8.30 ರೊಳಗೆ ಪರೀಕ್ಷಾ ಕೇಂದ್ರದ ಒಳಗೆ ಹಾಜರಿರಬೇಕು. ಪರೀಕ್ಷಾ ಕೇಂದ್ರಕ್ಕೆ ಬರುವಾಗ ಮತ್ತು ಹೋಗುವಾಗ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು ಎಂದು ತಿಳಿಡಿಸಲಾಗಿದೆ.

ಕೊರೋನಾ ಲಕ್ಷಣಗಳನ್ನು ಹೊಂದಿದ್ದರೂ ಪರೀಕ್ಷೆ ಬರೆಯಲು ಅವಕಾಶವನ್ನು ಕಲ್ಪಿಸಲಾಗಿದೆ. ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯನ್ನು ವ್ಯವಸ್ಥೆ ಮಾಡಲಾಗುತ್ತದೆ. ಇದಲ್ಲದೇ ಪಾಸಿಟಿವ್ ಬಂದಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಯಸಿದರೆ ಕೋವಿಡ್ ಕೇರ್ ಸೆಂಟರ್ ನಿಂದಲೇ ಬರೆಯಬಹುದು ಎಂದು ತಿಳಿಸಲಾಗಿದೆ.

ಯಾವುದಾದರೂ ವಿದ್ಯಾರ್ಥಿಗಳಿಗೆ ಕರೋನಾದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದರೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತದೆ. ಆ ವಿದ್ಯಾರ್ಥಿಗಳನ್ನು ಫ್ರೆಷರ್ ಎಂದೇ ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಈ ಎಲ್ಲ ಕಾರಣಗಳಿಂದಾಗಿ ಈ ಬಾರಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಯಾವುದೇ ಆತಂಕವನ್ನು ಇಟ್ಟುಕೊಳ್ಳಬೇಕಾಗಿಲ್ಲ ಎಂದು ಸಚಿವ ಸುರೇಶ ಕುಮಾರ್ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here