sslc-exams-a-big-test-for-karnataka-gov

ರಾಜ್ಯದಲ್ಲಿ ಕೊರೊನಾ ಆತಂಕದ ನಡುವೆಯೇ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಆರಂಭವಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸೋಂಕು ಹರಡದಂತೆ ತಡೆಗಟ್ಟಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸುಮಾರು 8.5 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆಯನ್ನು ಬರೆಯುತ್ತಿದ್ದಾರೆ.

ರಾಜ್ಯದಾದ್ಯಂತ ಪರೀಕ್ಷೆ ನಡೆಸಲು ಸರಕಾರ ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಪರೀಕ್ಷಾ ಕೇಂದ್ರಕ್ಕೆ ಬರುವ ವಿಧ್ಯಾರ್ಥಿಗಳಿಗೆ ತರ್ಮಲ್ ಸ್ಕ್ಯಾನಿಂಗ್ ಮಾಡಿ ಒಳಗೆ ಬಿಡಲಾಗುತ್ತಿದೆ. ಅಲ್ಲದೇ ಕೈಗಳಿಗೆ ಸ್ಯಾನಿಟೈಸರ್ ಮತ್ತು ಕಡ್ಡಾಯವಾಗಿ ಮಾಸ್ಕ್ ಬಳಕೆಗೆ ಒತ್ತು ನೀಡಲಾಗಿದೆ. ಮಾಸ್ಕ್ ದರಿಸದೆ ಬಂದ ವಿಧ್ಯಾರ್ಥಿಗಳಿಗೆ ಮಾಸ್ಕ್ ವಿತರಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಜ್ವರ ಕಾಣಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಟಡಿಯನ್ನು ಮಿಸಲಿಡಲಾಗಿದ್ದು, ಅಲ್ಲಿಯೇ ಕೂರಿಸಿ ಪರೀಕ್ಷೆ ನಡೆಸಲಾಗುತ್ತದೆ. ಇನ್ನು ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ.

ಈ ನಡುವೆಯೇ ಪರೀಕ್ಷಾ ಕೇಂದ್ರಗಳು ಸುರಕ್ಷಾ ಕೇಂದ್ರಗಳಾಗಿ ಬದಲಾಗಿವೆ. ಯಾವುದೇ ಆತಂಕಗಳಿಲ್ಲದೆ ಮಕ್ಕಳನ್ನು ಪರೀಕ್ಷೆಗೆ ಕಳುಹಿಸಿ ಕೊಡಿ ಎಂದು ಶಿಕ್ಷಣ ಸಚಿವ ಸುರೇಶ ಕುಮಾರ್ ಮನವಿಯನ್ನು ಮಾಡಿದ್ದಾರೆ.

LEAVE A REPLY

Please enter your comment!
Please enter your name here