2nd-puc-results-tentatively-on-july20-clarifies-minister-suresh-kumar

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.

ಇಂದು ನಗರದ ಮೌಲ್ಯಮಾಪನ ಕೇಂದ್ರಗಳಿಗೆ ಬೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ ಕುಮಾರ್ ಅವರು ಈ ಬಾರಿ ರಾಜ್ಯದ 220 ಕೇಂದ್ರಗಳಲ್ಲಿ ಅಗತ್ಯ ಸುರಕ್ಷಿತ ಕ್ರಮಗಳೊಂದಿಗೆ ಮೌಲ್ಯಮಾಪನ ಪ್ರಕ್ರೀಯೆಯು ನಡೆಯುತ್ತಿದೆ. 120 ಮೌಲ್ಯಮಾಪನ ಕೇಂದ್ರಗಳಲ್ಲಿ ಈಗಾಗಲೇ ಮೌಲ್ಯಮಾಪನ ಪ್ರಕ್ರೀಯೆ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ.

ಇನ್ನು ಉಳಿದ ಕೇಂದ್ರಗಳಲ್ಲಿ ಕೇವಲ 10 ದಿನಗಳಲ್ಲಿ ಮೌಲ್ಯಮಾಪನ ಪ್ರಕ್ರೀಯೆಯು ಪೂರ್ಣಗೊಳ್ಳಲಿದೆ. ಈ ಬಾರಿ 8.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ನೀಡಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here