ಕಲಬುರಗಿಗೆ ಮಲ್ಲಿಕಾರ್ಜುನ ಖರ್ಗೆ: ಭರ್ಜರಿ ಸ್ವಾಗತಕ್ಕೆ ಕಾಂಗ್ರೆಸ್ ಸಿದ್ಧತೆ !

state-congress-to-felicitate-kharge-in-kalaburagi

ಕಲಬುರಗಿ: ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಡಿ.10 ರಂದು ಕಲಬುರಗಿಗೆ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಖರ್ಗೆಯವರ ಭರ್ಜರಿ ಸ್ವಾಗತಕ್ಕೆ ಕಾಂಗ್ರೆಸ್ ಭಾರೀ ಸಿದ್ಧತೆಗಳನ್ನು ನಡೆಸುತ್ತಿದೆ.

ಎಐಸಿಸಿ ಅಧ್ಯಕ್ಷ  ಸ್ಥಾನಕ್ಕೆ ಏರಿದ ಬಳಿಕ ಇದೆ ಮೊದಲಬಾರಿಗೆ ಕಲಬುರಗಿಗೆ ಆಗಮಿಸುತ್ತಿರುವ ಖರ್ಗೆಯವರನ್ನು ವಿಶೇಷವಾಗಿ ಸ್ವಾಗತಿಸಲು ಎಲ್ಲ ಸಿದ್ಧತೆಗಳು ನಡೆಯುತ್ತಿವೆ. ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಧ್ಯಕ್ಷರಿಗೆ ಏರ್‌ಪೋರ್ಟ್‌ನಿಂದ ನೂತನ ವಿದ್ಯಾಲಯ ಮೈದಾನದವರೆಗೆ ಭವ್ಯ ಮೆರವಣಿಗೆಯನ್ನು ಆಯೋಜಿಸುವ ಮೂಲಕ ಸ್ವಾಗತಿಸಲು ಯೋಜಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಿರಿಯ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ಇದನ್ನೂ ಓದಿರಿ: ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು; ಮೊದಲ ಬಾರಿಗೆ ಸರ್ಕಾರಿ ವೈದ್ಯರಾಗಿ ನೇಮಕ!

LEAVE A REPLY

Please enter your comment!
Please enter your name here