ಬೆಂಗಳೂರು: ಕೊರೋನಾ ಲಾಕ್ಡೌನ್ನಿಂದಾಗಿ ಒಂದೆಡೆ ಜನ ಆದಾಯ ಇಲ್ಲದೆ ಸಂಕಷ್ಟಕ್ಕೀಡಾಗಿದ್ದು, ಮತ್ತೊಂದೆಡೆ ಪೆಟ್ರೋಲ್ ಬೆಲೆ ಏರಿಕೆ ದೆಸೆಯಿಂದ ದಿನೋಪಯೋಗಿ ವಸ್ತುಗಳ ಬೆಲೆಯೂ ಗಗನಕ್ಕೆ ಏರುತ್ತಿದ್ದು, ಸಾರ್ವಜನಿಕರು ಪ್ರತಿನಿತ್ಯ ಬದುಕುವುದೇ ದುಸ್ಥರವಾಗಿದೆ. ಈ ನಡುವೆ ರಾಜ್ಯ ಸರ್ಕಾರ ಇಂದು ವಿದ್ಯುತ್ ಬೆಲೆಯನ್ನು ಏರಿಸುವ ಮೂಲಕ ಜನರಿಗೆ ಶಾಕ್ ನೀಡಿದೆ.
ಇದನ್ನೂ ಓದಿರಿ: ಜೂನ್ 14ರ ನಂತರ 5 ಹಂತಗಳಲ್ಲಿ ಅನ್ ಲಾಕ್ ಮಾಡಲು ನಿರ್ಧಾರ: ಕಂದಾಯ ಸಚಿವ ಆರ್. ಅಶೋಕ್
ಬೆಸ್ಕಾಂ ಸೇರಿದಂತೆ ಐದು ನಿಗಮಗಳಿಂದ ಪ್ರತಿ ಯುನಿಟ್ ಗೆ 135 ಪೈಸೆ ಹೆಚ್ಚಳ ಮಾಡುವಂತೆ ಸರಕಾರಕ್ಕೆ ಪ್ರಸ್ತಾವನೆಯನ್ನು ಇತ್ತಿದ್ದವು. ಈ ಪ್ರಸ್ತಾವನೆಗೆ ಕೆಪಿಟಿಸಿಎಲ್ ದರ ನಿಗದಿ ಮಾಡಲಿದೆ ಎಂದು ಹೇಳಲಾಗಿತ್ತು. ಆದರೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಚಿವರೊಂದಿಗೆ ಚರ್ಚಿಸಿ, ಯುನಿಟ್ ಗೆ 30 ಪೈಸೆ ಏರಿಕೆ ಮಾಡಲು ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪರಿಷ್ಕೃತ ದರಗಳು ಏಪ್ರಿಲ್ 1, 2021 ರ ನಂತರದ ಮೊದಲ ಮೀಟರ್ ಓದುವ ದಿನಾಂಕದಿಂದ ಬಳಕೆ ಮಾಡುವ ವಿದ್ಯುತ್ಛಕ್ತಿಗೆ ಅನ್ವಯವಾಗಲಿದೆ. ಏಪ್ರಿಲ್ ಮತ್ತು ಮೇ ತಿಂಗಳ ಬಾಕಿಯನ್ನು ಯಾವುದೇ ಬಡ್ಡಿ ವಿಧಿಸದೆ ಬಾಕಿಯನ್ನು ಪಡೆದುಕೊಳ್ಳಲು ಆದೇಶಿಸಲಾಗಿದೆ.