ಬೆಂಗಳೂರು : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ಇರುವುದು ದೃಡ ಪಟ್ಟಿದೆ. ಈ ಕುರಿತು ಅವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು, ತನ್ನ ಸಮಪರ್ಕಕ್ಕೆ ಬಂದವರು ಎಚ್ಚರ ವಹಿಸುವಂತೆ ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಕಚೇರಿ ಮತ್ತು ನಿವಾಸದ 7 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಸಮಯದಲ್ಲಿ ಮುಂಜಾಗ್ರತಾ ಕ್ರಮವಾಗಿ ಯಡಿಯೂರಪ್ಪನವರು ಹೋಂ ಕ್ವಾರನಟೈನ್ ಗೆ ಒಳಗಾಗಿದ್ದರು.
ನಂತರ ಕೊರೊನಾ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಈ ವರದಿಯು ಜುಲೈ 18 ರಂದು ಹೊರಬಿದ್ದು, ನೆಗೆಟಿವ್ ಇರುವುದಾಗಿ ಹೇಳಲಾಗಿತ್ತು. ಆ ನಂತರ ನಿರಾಳರಾದ ಬಿ ಎಸ್ ವೈ ತಮ್ಮ ಕೆಲಸದಲ್ಲಿ ಭಾಗಿಯಾಗಿದ್ದರು. ಆದರೆ ನಿನ್ನೆ ಮತ್ತೆ ಪರೀಕ್ಷೆ ಮಾಡಿಸಲಾಗಿದ್ದು, ವರದಿಯು ಪಾಸಿಟಿವ್ ಬಂದಿದೆ ಎಂದು ಅವರೇ ತಿಳಿಸಿದ್ದಾರೆ.
ಇದನ್ನೂ ಓದಿರಿ: ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಕೊರೋನಾ ಪಾಸಿಟಿವ್
ನಿನ್ನೆ ಟ್ವಿಟ್ಟರ್ ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಟ್ವೀಟ್ ಮಾಡಿ ತಿಳಿಸಿದ್ದು, ನಾನು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ವರದಿ ಪಾಸಿಟಿವ್ ಬಂದಿದೆ. ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಮಪರ್ಕಕ್ಕೆ ಬಂದಿರುವವರು, ಕ್ವಾರನಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— B.S. Yediyurappa (@BSYBJP) August 2, 2020