ನವದೆಹಲಿ: ರಾಜೀವ್ ಗಾಂಧಿ ಹಂತಕರ ಬಿಡುಗಡೆ ಮಾಡಿ ಆದೇಶವನ್ನು ಸುಪ್ರೀಂ ಕೋರ್ಟ್ ಹೊರಡಿಸಿದೆ. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಾದ ನಳಿನಿ ಶ್ರೀಹರನ್ ಮತ್ತು ಇತರ ಐವರನ್ನು ಬಿಡುಗಡೆ ಮಾಡಲು ಸುಪ್ರೀಂ ಆದೇಶ ನೀಡಿದೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ನಳಿನಿ ಶ್ರೀಹರನ್ ಮತ್ತು ಆರ್‌ಪಿ ರವಿಚಂದ್ರನ್ ಸೇರಿದಂತೆ 7 ಅಪರಾಧಿಗಳ ಶಿಕ್ಷೆಯನ್ನು ಕಡಿಮೆ ಮಾಡುವಂತೆ ಕೋರಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಅಲ್ಲದೇ ತಮ್ಮ ಸಹ ಅಪರಾಧಿ ಎಜಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಿದಂತೆ ತಮ್ಮನ್ನೂ ಬಿಡುಗಡೆ ಮಾಡಬೇಕೆಂದು ಕೋರಿದ್ದರು.
ಇದನ್ನೂ ಓದಿ: ದಕ್ಷಿಣ ಭಾರತದ ಮೊದಲ ‘ಒಂದೇ ಭರತ್’ ಎಕ್ಸ್ ಪ್ರೆಸ್’ ರೈಲಿಗೆ ಮೋದಿ ಚಾಲನೆ !
ರಾಜೀವ್ ಗಾಂಧಿ ಹಂತಕರ ಶಿಕ್ಷೆಯನ್ನು ಕಡಿಮೆ ಮಾಡುವ ಕುರಿತಂತೆ ತಮಿಳು ನಾಡು ಸರಕಾರ ಸಹ ಒಪ್ಪಿಗೆ ನೀಡಿತ್ತು. ಈ ಕುರಿತಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಳಿನಿ ಶ್ರೀಹರನ್ ಮತ್ತು ಇತರ ಐವರನ್ನು ಬಿಡುಗಡೆ ಮಾಡಲು ಸುಪ್ರೀಂ ಆದೇಶ ನೀಡಿದೆ.
ಇದನ್ನೂ ಓದಿ: ಕೆಂಪೇಗೌಡರ 108 ಅಡಿ ಎತ್ತರದ ‘ಪ್ರಗತಿಯ ಪ್ರತಿಮೆ’ ಅನಾವರಣಗೊಳಿಸಿದ ಪ್ರಧಾನಿ ಮೋದಿ