ನವದೆಹಲಿ: 1000 ಮತ್ತು 500 ರೂಪಾಯಿ ನೋಟುಗಳನ್ನು ಅಮಾನ್ಯಗೊಳಿಸಿದ (Demonetisation Verdict) 2016 ರ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ನ ಐವರು ನ್ಯಾಯಾಧೀಶರ ಪೀಠವು ಇಂದು ಮಹತ್ವದ ತೀರ್ಪನ್ನು ಪ್ರಕಟಿಸಿದೆ.
ನೋಟು ಅಮಾನ್ಯೀಕರಣ ಕುರಿತಂತೆ ಇಂದು ತೀರ್ಪು ಪ್ರಕಟಿಸಿರುವ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರದ ನೋಟ್ ಬ್ಯಾನ್ ಸಿಂಧುತ್ವವವನ್ನು ಎತ್ತಿಹಿಡಿದಿದೆ. ಇಂತಹ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ. ಇದು ಆರ್ ಬಿ ಐ ಮತ್ತು ಸರ್ಕಾರದ ನಡುವಿನ ಚರ್ಚೆಯಾಗಿದೆ. ಇಂತಹ ನಿರ್ಧಾರವನ್ನು ಸಂಸತ್ ತೆಗೆದುಕೊಳ್ಳಲಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
2016 ರಲ್ಲಿ ನೋಟು ಅಮಾನ್ಯೀಕರಣಗೊಳಿಸುವಂತೆ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದ ವಿಚಾರಕ್ಕೆ ವಿರೋಧವಾಗಿ ನ್ಯಾಯಾಲಯದಲ್ಲಿ 50 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿದಾರರ ಮತ್ತು ಸರಕಾರದ ವಾದವನ್ನು ಆಲಿಸಿದ ನ್ಯಾಯಪೀಠವು ಡಿಸೆಂಬರ್ 7 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.
Supreme Court upholds the decision of the Central government taken in 2016 to demonetise the currency notes of Rs 500 and Rs 1000 denominations. pic.twitter.com/sWT70PoxZX
— ANI (@ANI) January 2, 2023
ನೋಟು ಅಮಾನನೀಕರಣ ನಿರ್ಧಾರವು ನಿರಂಕುಶ, ಅಸಾಂವಿಧಾನಿಕ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆಯಡಿ ಸೂಚಿಸಲಾದ ಅಧಿಕಾರಗಳ ದುರುಪಯೋಗವಾಗಿದೆ ಎಂದು ಅರ್ಜಿದಾರರು ವಾದವನ್ನು ಮುಂದಿಟ್ಟಿದ್ದರು.
ಇದನ್ನೂ ಓದಿರಿ: ಸಿದ್ದೇಶ್ವರಶ್ರೀ ಗಂಜಿ ಸೇವಿಸಿದ್ದಾರೆ, ಆರೋಗ್ಯ ಸ್ಥಿರವಾಗಿದೆ: ವೈದ್ಯರ ಸ್ಪಷ್ಟನೆ