thawar-chand-gehlot-appointed-as-new-governor-of-karnataka

ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ ರಾಜ್ಯಪಾಲರಾಗಿದ್ದ ವಜುಬಾಯ್ ವಾಲಾ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನೂತನ ರಾಜ್ಯಪಾಲರನ್ನು ರಾಷ್ಟ್ರಪತಿಯವರು ನೇಮಕ ಮಾಡಿದ್ದಾರೆ. ಈ ಮೂಲಕ ತಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಅವರು 19 ನೇ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಕರ್ನಾಟಕ ಮಾತ್ರವಲ್ಲದೇ 8 ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಕ ಮಾಡಲಾಗಿದ್ದು, ಜಾರ್ಖಂಡ್ ಗೆ ರಮೇಶ್ ಬೈಸ್, ಹರಿಯಾಣಕ್ಕೆ ಬಂದಾರು ದತ್ತಾತ್ರೇಯ, ಮಿಜೋರಾಂ ಗೆ ಹರಿಬಾಬು ಕಂಭಂಪತಿ, ಮಧ್ಯಪ್ರದೇಶಕ್ಕೆ ಮಂಗುಭಾಯ್ ಛಗನ್ಭಾಯ್ ಪಟೇಲ್, ಹಿಮಾಚಲ ಪ್ರದೇಶಕ್ಕೆ ರಾಜೇಂದ್ರನ್ ವಿಶ್ವನಾಥ್ ಅರ್ಲೆಕರ್, ಗೋವಾಕ್ಕೆ ಪಿ ಎಸ್ ಶ್ರೀಧರನ್ ಪಿಳ್ಳೈ, ತ್ರಿಪುರಾ ಕ್ಕೆ ಸತ್ಯದೇವ್ ನಾರಾಯಣ್ ಆರ್ಯ ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ತಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಅವರು ಮೂರು ಬಾರಿ ಮಧ್ಯಪ್ರದೇಶದ ಶಾಸಕರಾಗಿ, ನಾಲ್ಕುಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗ ಸದ್ಯ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಭಲೀಕರಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಹಿಂದೊಮ್ಮೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯೂ ಆಗಿದ್ದರು. ಸಂಘ ಪರಿವಾರದ ಹಿನ್ನೆಲೆ ಹೊಂದಿರುವ ಇವರು ಬಿಜೆಪಿಯ ಕೇಂದ್ರ ಚುನಾವಣಾ ಸಮೀತಿಯ ಸದಸ್ಯರು ಆಗಿದ್ದರು.

LEAVE A REPLY

Please enter your comment!
Please enter your name here