ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

there-is-no-question-of-changing-the-cm-in-karnataka-says-incharge-arun-singh

ನವದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಇಲ್ಲ, ಹೈಕಮಾಂಡ್ ಮಟ್ಟದಲ್ಲಿ ಈ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಬೆಲೆ ಏರಿಕೆ ಬಿಸಿಯ ನಡುವೆ ಮತ್ತೊಂದು ಶಾಕ್ ಕೊಟ್ಟ ರಾಜ್ಯ ಸರ್ಕಾರ, ವಿದ್ಯುತ್​ ದರ ದಿಢೀರ್ ಏರಿಕೆ

ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸ್ಥಾನದ ಬದಲಾವಣೆ ಕುರಿತಂತೆ ನಡೆಯುತ್ತಿರುವ ವಿದ್ಯಮಾನಗಳಿಗೆ ಹಾಗೂ ಊಹಾಪೋಹಗಳಿಗೆ ಅರುಣ್ ಸಿಂಗ್ ಅವರು ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸಮಸ್ಯೆಯಾಗಿ ಕಾಡುತ್ತಿದೆ. ಈ ಸಮಯದಲ್ಲಿ ಉತ್ತಮ ಕಾರ್ಯಗಳನ್ನು ಯಡಿಯೂರಪ್ಪನವರು ಮಾಡುತ್ತಿದ್ದಾರೆ. ಕೋವಿಡ್ ಸಮಸ್ಯೆಯನ್ನು ಯಶಸ್ವಿಯಾಗಿ ನಿರ್ವಹಿಸಿಕೊಂಡು ಹೋಗುತ್ತಿದ್ದಾರೆ. ಅವರ ಕುರಿತಾಗಿ ವರಿಷ್ಠರಿಗೆ ಸಮಾಧಾನವಿದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here