ಬೆಂಗಳೂರು (ಜೂ.26): ವಿಧಾನಸೌಧದಲ್ಲಿ ಇಂದು ಕೋವಿಡ್-19 ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಚರ್ಚಿಸಲು ಸರ್ವಪಕ್ಷ ಸಭೆ ಕರೆಯಲಾಗಿತ್ತು. ಈ ಸಮಯದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು ರಾಜ್ಯದಲ್ಲಿ ಅರ್ಥಿಕ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ಲಾಕ್ ಡೌನ್ ಹೆರುವ ಪ್ರಶ್ನೆಯೇ ಇಲ್ಲಾ ಎಂದು ಸ್ಪಸ್ಟ ಪಡಿಸಿದರು.
ಈ ಕುರಿತಂತೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದ್ದೇನೆ. ಈ ಕುರಿತು ಸಂಪೂರ್ಣ ಚರ್ಚೆ ಮಾಡಲಾಗುತ್ತದೆ. ಅವರ ಕ್ಷೇತ್ರದಲ್ಲಿ ಯಾವ ರೀತಿಯಲ್ಲಿ ಕ್ರಮಕೈಗೊಳ್ಳಬಹುದು ಎನ್ನುವ ಕುರಿತು ವಿಚಾರ ಮಾಡಲಾಗುತ್ತದೆ. ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಲಾಕ್ ಡೌನ್ ತೀರ್ಮಾನವನ್ನು ಸದ್ಯಕ್ಕೆ ಕೈಬಿಡಲಾಗಿದೆ. ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಬೆಂಗಳೂರಿನಲ್ಲಿ ಕೋವಿಡ್19 ಸೋಂಕು ಹರಡುವುದನ್ನು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಂದು ವಿಧಾನಸೌಧದ ಕಮಿಟಿ ಕೊಠಡಿಯಲ್ಲಿ ಸಂಬಂಧಪಟ್ಟ ಸಚಿವರು, ಶಾಸಕರು, ಸಂಸದರು, ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ಕಟ್ಟುನಿಟ್ಟಿನ ಗೃಹ ಕ್ವಾರಂಟೈನ್, ಸೂಕ್ತ ಚಿಕಿತ್ಸೆ ಸೇರಿದಂತೆ ಎಲ್ಲ ಮಾರ್ಗಸೂಚಿಗಳ ಬಿಗಿ ಪಾಲನೆಗೆ ಸೂಚನೆ ನೀಡಲಾಗಿದೆ. pic.twitter.com/0LY6aBRCTz
— B.S. Yediyurappa (@BSYBJP) June 25, 2020
ಇನ್ನುಈ ಸಭೆಯಬಳಿಕ ಟ್ವಿಟ್ ಮಾಡಿರುವ ಬಿಎಸ್ ಯಡಿಯೂರಪ್ಪನವರು ಕೋವಿಡ್-19 ಸೋಂಕು ಹರಡುವುದನ್ನು ನಿಯತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಸಭೆಯಲ್ಲಿ ಸಚಿವರು, ಶಾಸಕರು, ಸಂಸದರು, ಅಧಿಕಾರಿಗಳೊಂದಿಗೆ ಚರ್ಚಿಸಿ ಕಟ್ಟುನಿಟ್ಟಿನ ಗೃಹ ಕ್ವಾರಂಟೈನ್ ಮತ್ತು ಸೂಕ್ತ ಚಿಕಿತ್ಸೆ ಸೇರಿದಂತೆ ಎಲ್ಲ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಈ ಕುರಿತಂತೆ ಆರ್ ಅಶೋಕ್ ಸಹ ಮಾತನಾಡಿದ್ದು, ಸಭೆಯಲ್ಲಿ ಬೆಂಗಳೂರಿನ ಎಲ್ಲ ಪಕ್ಷದ ಶಾಸಕರ ಅಭಿಪ್ರಾಯವನ್ನು ತೆಗೆದುಕೊಳ್ಳಲಾಗುವುದು. ಇನ್ನಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಳ್ಳುವ ವಿಚಾರವಾಗಿ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿರಿ: ರಾಜ್ಯಕ್ಕಿಂದು ಕೊರೋನಾಘಾತ: ಹನ್ನೊಂದು ಸಾವಿರದ ಗಡಿದಾಟಿದ ಸೋಂಕಿತರ ಸಂಖ್ಯೆ