ನಾಳೆ ನಾಡಿನಾದ್ಯಂತ ರಾಜ್ಸೋತ್ಸವ, ಸಂಜೆ ಪುನೀತ್ ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

no-merger-of-nandini-with-amul-cm-bommai-clarifies

ಬೆಂಗಳೂರು: ನಾಳೆ ನಾಡಿನಾದ್ಯಂತ 67ನೇ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಸಂಜೆ ವಿಧಾನಸೌಧದ ಮುಂಭಾಗ ನಡೆಯುವ ಸಮಾರಂಭದಲ್ಲಿ ದಿವಂಗತ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರೊಂದಿಗೆ ಮಾತನಾಡುತ್ತ, ಸಂಜೆ ನಡೆಯಲಿರುವ ಸಮಾರಂಭದಲ್ಲಿ ವಿಶೇಷ ಸಾಧನೆ ಮಾಡಿರುವ ಗಣ್ಯರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಹಿರಿಯ ಸಾಧಕರು, ಚಿತ್ರರಂಗದ ಗಣ್ಯರು ಸೇರಿದಂತೆ ರಾಜಕೀಯ ನಾಯಕರೆಲ್ಲ ಭಾಗವಹಿಸಲಿದ್ದಾರೆ. ಅಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕು ಎಂದು ಇದೆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕೇಳಿಕೊಂಡರು.

ಇದನ್ನೂ ಓದಿರಿ: ಭಾರತದಲ್ಲಿ ಟು ಫಿಂಗರ್ ಟೆಸ್ಟ್ ನಿಷೇಧ; ಸುಪ್ರೀಂ ಕೋರ್ಟ್ ಮಹತ್ವದ ಆದೇಶ

LEAVE A REPLY

Please enter your comment!
Please enter your name here