sandalwood-famous-actor-dr-rajkumars-son-puneet-rajkumar-is-no-more

ಬೆಂಗಳೂರು: ಪುನೀತ್ ರಾಜಕುಮಾರ ಸಾವು ಕನ್ನಡ ಚಿತ್ರರಂಗ, ಅಭಿಮಾನಿಗಳು ಸೇರಿದಂತೆ ಎಲ್ಲರಿಗೂ ತುಂಬಲಾರದ ನಷ್ಟವಾಗಿದೆ. ಅಪಾರ ಅಭಿಮಾನಿಗಳನ್ನು ಹೊಂದಿದ್ದ ಪ್ರತಿಭಾವಂತ ನಟನನ್ನು ಅಕಾಲದಲ್ಲಿ ಕಳೆದುಕೊಂಡು ರಾಜ್ಯ ದುಃಖತಪ್ತವಾಗಿದೆ. ಈ ಸಮಯದಲ್ಲಿ ರಾಜ್ಯದ 550 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನಮ್ಮನ್ನಗಲಿದ ಪುನೀತ್ ರಾಜಕುಮಾರ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಇಂದು ರಾಜ್ಯದ 550 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂಜೆ 6 ಗಂಟೆಗೆ ವಿಶೇಷ ಕಾರ್ಯಕ್ರಮದ ಮೂಲಕ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here