ಹೈದರಾಬಾದ್: ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ತುತ್ತಾಗಿದ್ದ ಮಂಗಳಮುಖಿಯರು ಇದೀಗ ದೇಶದಲ್ಲಿ ಇತಿಹಾಸ ನಿರ್ಮಿಸಿದ್ದು, ಇದೇ ಮೊದಲ ಬಾರಿಗೆ ತೆಲಂಗಾಣದಲ್ಲಿ ಸರ್ಕಾರಿ ವೈದ್ಯರಾಗಿ ಅಧಿಕೃತವಾಗಿ ನೇಮಕಗೊಂಡಿದ್ದಾರೆ.
ಇಬ್ಬರೂ ಮಂಗಳಮುಖಿಯರು ಎಂಬಿಬಿಎಸ್ ಪದವಿಯನ್ನು ಮುಗಿಸಿದ್ದಾರೆ. ಸರಕಾರಿ ಆಸ್ಪತ್ರೆಗೆ ವೈದ್ಯರಾಗಿ ಆಯ್ಕೆಯಾಗುವ ಮೂಲಕ ದೇಶದಲ್ಲಿ ಇತಿಹಾಸವನ್ನು ನಿರ್ಮಾಣ ಮಾಡಿದ್ದಾರೆ. ಪ್ರಾಚಿ ರಾಥೋಡ್ ಹಾಗೂ ರುತ್ ಜಾನ್ ಪೌಲ್ ಇವರೇ ಇಂತಹ ದೊಡ್ಡ ಸಾಧನೆಯನ್ನು ಮಾಡಿರುವ ದೇಶದ ಮೊದಲ ಮಂಗಳಮುಖಿಯರು.
ಇದನ್ನೂ ಓದಿರಿ: SSLC Exam 2023: ಪರೀಕ್ಷೆ’ಯ ‘ಅಂತಿಮ ವೇಳಾಪಟ್ಟಿ’ ಪ್ರಕಟ, ಇಲ್ಲಿದೆ ವೇಳಾಪಟ್ಟಿ
2015 ರಲ್ಲಿ ಈ ಲೈಂಗಿಕ ಅಲ್ಪಸಂಖ್ಯಾತರು ಎಂಬಿಬಿಎಸ್ ಪದವಿ ಮುಗಿಸಿದ್ದರು. ನಂತರ ಕೆಲ ವರ್ಷ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಆದರೆ, ಇವರ ಸೇವೆ ಪಡೆಯಲು ಅನೇಕ ಆಸ್ಪತ್ರೆಗಳು ಹಾಗೂ ರೋಗಿಗಳು ಮುಂದೆ ಬರುತ್ತಿರಲಿಲ್ಲ. ಪ್ರಾಚಿ ರಾತೋಡ್ ಅವರ ಲಿಂಗ ವಿಚಾರವಾಗಿ ಅವರು ಸೇವೆ ಸಲ್ಲಿಸುತ್ತಿದ್ದ ಒಂದು ದೊಡ್ಡ ಖಾಸಗಿ ಆಸ್ಪತ್ರೆಯಿಂದ ಅವರನ್ನು ಸೇವೆಯಿಂದ ವಜಾ ಮಾಡಲಾಗಿತ್ತು.
ಇದೀಗ ಈ ಇಬ್ಬರೂ ಮಂಗಳಮುಖಿಯರನ್ನು ತೆಲಂಗಾಣದ ಸರ್ಕಾರಿ ಆಸ್ಪತ್ರೆಯಾಗಿರುವ ಓಸ್ಮಾನಿಯಾ ಸಾರ್ವಜನಿಕ ಆಸ್ಪತ್ರೆಯ ಸೇವೆಗೆ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಹೆಮ್ಮೆಯಿಂದ ಮಾತನಾಡಿರುವ ಪ್ರಾಚಿ ರಾಥೋಡ್, ಲಿಂಗದ ಕಾರಣಕ್ಕಾಗಿ ನಗರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಿಂದ ಕೆಲಸದಿಂದ ತೆಗೆದುಹಾಕಲಾಗಿತ್ತು ಎಂದು ಬಾಲ್ಯದಿಂದಲೂ ಸಹಿಸಬೇಕಾಗಿದ್ದ ಸಾಮಾಜಿಕ ಕಳಂಕ ಮತ್ತು ತಾರತಮ್ಯವನ್ನು ಮೆಲುಕು ಹಾಕಿದರು.
ಇದನ್ನೂ ಓದಿರಿ: Farooq Abdullah: ಭಾರತೀಯ ಸೇನೆ ಮೇಲೆ ಗಂಭೀರ ಆರೋಪ ಮಾಡಿದ ಫಾರೂಕ್ ಅಬ್ದುಲ್ಲಾ