ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ (UAS Dharwad) ಖಾಲಿ ಇರುವ ಲೈಬ್ರರಿ ಅಸಿಸ್ಟೆಂಟ್ ಹುದ್ದೆಗಳ (UAS Dharwad Recruitment 2023) ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು 31 ಅಕ್ಟೋಬರ್ 2023 ರ ಒಳಗೆ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿಯೇ ಉದ್ಯೋಗ ಮಾಡುವ ಆಸಕ್ತರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮುಂದೆ ಉದ್ಯೋಗಕ್ಕೆ ಸಂಬಂಧಿಸಿದ ಅಧಿಕೃತ ನೋಟಿಫಿಕೇಶನ್ ಸಹ ಒದಗಿಸಲಾಗಿದ್ದು, ಸರಿಯಾಗಿ ಮತ್ತೊಮ್ಮೆ ಓದಿಕೊಂಡು ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.
ಇದನ್ನೂ ಓದಿರಿ: CEPT Recruitment 2023:38 ಹುದ್ದೆಗಳು ಕಾಲಿಯಿದ್ದು ಇಂದೇ ಅರ್ಜಿ ಸಲ್ಲಿಸಿ
UAS Dharwad Recruitment 2023 ರ ಹುದ್ದೆಯ ಮಾಹಿತಿ
ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ (UAS Dharwad Recruitment 2023) ಒಟ್ಟು 2 ಹುದ್ದೆಗಳು ಕಾಲಿಯಿದ್ದು, ಹುದ್ದೆಯ ಹೆಸರು ಮತ್ತು ಲಭ್ಯವಿರುವ ಹುದ್ದೆಗಳ ವಿವರ ಈ ಕೆಳಗಿನಂತೆ ಇರುತ್ತದೆ.
ಇಲಾಖೆ ಹೆಸರು | ಕೃಷಿ ವಿಶ್ವವಿದ್ಯಾಲಯ ಧಾರವಾಡ |
ಹುದ್ದೆಗಳ ಹೆಸರು | ಲೈಬ್ರರಿ ಅಸಿಸ್ಟೆಂಟ್ |
ಒಟ್ಟು ಹುದ್ದೆಗಳು | 2 |
ಅರ್ಜಿ ಸಲ್ಲಿಸುವ ಬಗೆ | ಆಫ್ ಲೈನ್ ಮೂಲಕ |
ವಿದ್ಯಾರ್ಹತೆ
ಕೃಷಿ ವಿಶ್ವವಿದ್ಯಾಲಯ ಧಾರವಾಡ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು B. Lib ಅನ್ನು ಪೂರ್ಣಗೊಳಿಸಿರಬೇಕು. ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ Sc, ಅಥವಾ M. Lib.Sc. ಪೂರ್ಣ ಗೊಳಿಸಿರಬೇಕು.
ವೇತನಶ್ರೇಣಿ
ಕೃಷಿ ವಿಶ್ವವಿದ್ಯಾಲಯ ಧಾರವಾಡ (UAS Dharwad Recruitment 2023) ಲೈಬ್ರರಿ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.14,000 ಪ್ರತಿ ತಿಂಗಳು ನಿಗದಿಪಡಿಸಲಾಗಿದೆ.
ಇದನ್ನೂ ಓದಿರಿ: KEA Recruitment 2023: 100 ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ
ಕೃಷಿ ವಿಶ್ವವಿದ್ಯಾಲಯ ಧಾರವಾಡದ ಲೈಬ್ರರಿ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ
ಕೃಷಿ ವಿಶ್ವವಿದ್ಯಾಲಯ ಧಾರವಾಡದ ಲೈಬ್ರರಿ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿ ಆಯ್ಕೆ ಮಾಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ.
ಇದನ್ನೂ ಓದಿರಿ:RailTel Recruitment 2023: ರೈಲ್ವೆ ಇಲಾಖೆಯಲ್ಲಿ ಡೆಪ್ಯುಟಿ ಮ್ಯಾನೇಜರ್ ಸೇರಿದಂತೆ ಒಟ್ಟು 21 ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಬೇಕಾದ ವಿಳಾಸ
ಚೇಂಬರ್, ಸಹ ನಿರ್ದೇಶಕರು, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಧಾರವಾಡ 580005
ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 10 ಅಕ್ಟೋಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 31 ಅಕ್ಟೋಬರ್ 2023