union-minister-ravi-shankar-prasads-twitter-account-has-been-locked

ನವದೆಹಲಿ: ಜಾಗತಿಕ ಮಟ್ಟದಲ್ಲಿ ಬೆಳೆದು ನಿಂತಿರುವ ಟ್ವಿಟ್ಟರ್ ಕೇಂದ್ರ ಸರಕಾರದ ಕಾನೂನು ನಿಯಮಗಳನ್ನು ಪಾಲಿಸದೆ ಎಡವಟ್ಟು ಮಾಡಿಕೊಂಡ ಸಾಮಾಜಿಕ ಜಾಲತಾಣ ಸಂಸ್ಥೆ ಇದೀಗ ಕೇಂದ್ರ ಸಚಿವರೊಬ್ಬರ ಖಾತೆಗೆ ಪ್ರವೇಶವನ್ನು ಬ್ಲಾಕ್ ಮಾಡುವ ಮೂಲಕ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ.

ಈ ಕುರಿತಂತೆ ಕೇಂದ್ರ ಐಟಿ ಖಾತೆ ಸಚಿವ ರವಿಶಂಕರ್ ಪ್ರಸಾದ್ ಅವರು ಮತ್ತೊಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ತನ್ನ ಟ್ವಿಟ್ಟರ್ ಖಾತೆಯನ್ನು ಪ್ರವೇಶಿಸುವುದಕ್ಕೆ ನಿರ್ಬಂಧಿಸಲಾಗಿತ್ತು ಎಂದು ಹೇಳಿಕೊಂಡಿದ್ದಾರೆ. ಕಾರಣವನ್ನು ಕೇಳಲಾಗಿ ತಾವು ಯು ಎಸ್ ಎ  ಯ ಡಿಜಿಟಲ್ ಮಿಲೇನಿಯಂ ಕೃತಿಸ್ವಾಮ್ಯ ಕಾಯ್ದೆಯ ಉಲ್ಲಂಘನೆ ಮಾಡಿರುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ಟ್ವಿಟ್ಟರ್ ಖಾತೆ ಪ್ರವೇಶಕ್ಕೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಿಗೆ ಒಂದು ಗಂಟೆಗಳ ಕಾಲ ಖಾತೆ ಪ್ರವೇಶಕ್ಕೆ ಸಾಧ್ಯವಾಗಿರಲಿಲ್ಲ. ತಮ್ಮೊಂದಿಗೆ ನಡೆದ ಈ ಘಟನೆಯನ್ನು ಅವರು ಎಲ್ಲರೊಂದಿಗೆ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here