ಮುಂಬೈ: ಈ ಬಾರಿ ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿ ಪಾಕಿಸ್ತಾನದಲ್ಲಿ ನಡೆಯಲಿದ್ದು, ಭಾರತ ಪಾಕಿಸ್ತಾನಕ್ಕೆ ತೆರಳುವುದು ಅನುಮಾನಾಸ್ಪದ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಅವರು ತಿಳಿಸಿದ್ದಾರೆ. ಆದರೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಈ ಕುರಿತು ಮಾತನಾಡಿದ್ದು, ಏನು ಹೇಳಿದ್ದಾರೆ ನೋಡೋಣ..
ಪಾಕಿಸ್ತಾನದಲ್ಲಿ ನಡೆಯಲಿರುವ ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ಆಟಗಾರರು ಭಾಗವಹಿಸುವ ಕುರಿತು ಅನುಮಾನ ವ್ಯಕ್ತಪಡಿಸಿದ್ದರು. ಇದಕ್ಕೆ ಕೋಪಗೊಂಡ ಪಾಕಿಸ್ತಾನದ ಪಿಸಿಬಿ ಅಧ್ಯಕ್ಷ ಹಮೀಜ್ ರಾಜಾ ಭಾರತದಲ್ಲಿ ನಡೆಯಲಿರುವ ಒನ್ ಡೇ ಪಂದ್ಯಾವಳಿಯಲ್ಲಿ ಪಾಕಿಸ್ತಾನ ಭಾಗಿಯಾಗುವುದಿಲ್ಲ ಎಂದು ಹೇಳಿದ್ದರು.
ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಭಾರತ ಮತ್ತು ಪಾಕಿಸ್ತಾನ ನಡುವಿನ ಸರಣಿ ಮತ್ತು ಏಷ್ಯಾ ಕಪ್ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ನಮ್ಮ ಯೋಚನೆ ಏನು ಎಂಬುದು ಎಲ್ಲರಿಗೂ ತಿಳಿದಿದೆ. ನೆರೆಯ ರಾಷ್ಟ್ರ ಪಾಕಿಸ್ತಾನ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವುದು ಬಹುಮುಖ್ಯವಾಗಿದೆ. ಇದು ಸಾಧ್ಯವಾದರೆ ಮಾತ್ರ ಎರಡೂ ದೇಶಗಳ ನಡುವಿನ ಪಂದ್ಯಾವಳಿ ಏರ್ಪಡಿಸಲು ಸಾಧ್ಯ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿರಿ: ಮಾಂಡೌಸ್ ಚಂಡಮಾರುತದ ಎಫೆಕ್ಟ್; ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ, ಮೈ ಕೊರೆವ ಚಳಿ