unlock-2-in-the-state-metro-bus-runs-with-limit-capacity-all-shop-open-until-5pm

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಲಾಕ್ ಡೌನ್ ನಿಯಮಗಳನ್ನು ಸಡಿಲಗೊಳಿಸಲಾಗುತ್ತಿದೆ. ಇಂದು ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸಿ, ಅನ್ ಲಾಕ್ 3.0 ನಿಯಮಗಳನ್ನು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.

ಇಂದಿನ ಸಭೆಯಲ್ಲಿ ಚರ್ಚಿಸಿ ಮುಖ್ಯಮಂತ್ರಿ ಯಡಿಯೂರಪ್ಪನವರು ಅನ್ ಲಾಕ್ 3.0 ನಿಯಮಗಳನ್ನು ಬಿಡುಗಡೆ ಮಾಡಿದರು. ಇದರಂತೆ ದೇವಾಲಯ, ಬಾರ್ ಮತ್ತು ಮಾಲ್ ಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗಿದೆ. ಅಲ್ಲದೇ  ರಾಜ್ಯದಲ್ಲಿ ಇದುವರೆಗೆ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ವನ್ನು ತೆಗೆದುಹಾಕಲಾಗಿದೆ.

ಇದನ್ನೂ ಓದಿರಿ: ಜಿಯೋ ಬಳಕೆದಾರರಿಗೆ ಬಂಪರ್​ ಆಫರ್​: ತುರ್ತು ಡೇಟಾ ಸಾಲ ಸೌಲಭ್ಯ ಪ್ರಾರಂಭ

ಅನ್ ಲಾಕ್ 3.0 ರ ಮಾರ್ಗಸೂಚಿಯ ಪ್ರಕಾರ ಸರಕಾರಿ, ಕಾಸಗಿ ಮತ್ತು ಕೈಗಾರಿಕೆಗಳಲ್ಲಿ ಶೇ 100 ರಷ್ಟು ಉದ್ಯೋಗಿಗಳಿಗೆ ಅವಕಾಶವನ್ನು ನೀಡಲಾಗಿದೆ. ಇದಲ್ಲದೇ ಮೆಟ್ರೋ ರೈಲು ಮತ್ತು ಬಸ್ ಗಳಲ್ಲಿ ಶೇ 100 ರಷ್ಟು ಪ್ರಯಾಣಿಕರ ಭರ್ತಿಗೆ ಅವಕಾಶ ನೀಡಲಾಗಿದೆ. ಈಜುಕೊಳಗಳನ್ನು ಕ್ರೀಡಾಪಟುಗಳ ತರಬೇತಿಗಾಗಿ ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಇನ್ನು ಮದುವೆಗೆ 100 ಜನರಿಗೆ ಮತ್ತು ಅಂತ್ಯ ಸಂಸ್ಕಾರಕ್ಕೆ 20 ಜನರಿಗೆ ಭಾಗವಹಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಅನ್ ಲಾಕ್ 3.0 ನಲ್ಲಿ ಬಹುತೇಕ ಸೌಲಭ್ಯಗಳು ಲಭ್ಯವಿದ್ದರೂ, ರಾಜಕೀಯ, ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಪ್ರತಿಭಟನೆಗಳಿಗೆ ಅವಕಾಶವಿಲ್ಲ. ಇದಲ್ಲದೇ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಿಲ್ಲ. ಶಾಲೆಗಳನ್ನು ತೆರೆಯುವ ಕುರಿತಂತೆ ಪ್ರತ್ಯೇಕ ಸಭೆಗಳನ್ನು ನಡೆಸಿ ತೀರ್ಮಾನಿಸುವುದಾಗಿ ತಿಳಿಸಿದ್ದಾರೆ. ಇನ್ನು ದೇವಾಲಯಗಳಲ್ಲಿ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಇದನ್ನೂ ಓದಿರಿ: Aamir Khan: ಆಮಿರ್​​ ಖಾನ್​-ಕಿರಣ್​ ರಾವ್​ ವಿಚ್ಛೇದನ; 15 ವರ್ಷದ ದಾಂಪತ್ಯ ಜೀವನ ಅಂತ್ಯ

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here