ಲಖನೌ: ಕೊರೊನಾ ಸೋಂಕಿಗೆ ಒಳಗಾಗಿ ನರಳುತ್ತಿದ್ದ ಉತ್ತರ ಪ್ರದೇಶ ಸರಕಾರದ ಸಚಿವೆ ಕಮಲ್ ರಾಣಿ ವರುಣ್ (62) ಅವರು ಭಾನುವಾರ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿರಿ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಡ
ಉತ್ತರ ಪ್ರದೇಶ ಸರಕಾರದ ತಾಂತ್ರಿಕ ಶಿಕ್ಷಣ ಸಚಿವೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಕಮಲ್ ರಾಣಿ ವರುಣ್ ಅವರಿಗೆ ಕೊರೊನಾ ಸೋಂಕಿರುವುದು ಜುಲೈ 18 ರಂದು ಪತ್ತೆಯಾಗಿತ್ತು. ಬಳಿಕ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಇವರ ನಿಧನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.
उत्तर प्रदेश सरकार में मेरी सहयोगी, कैबिनेट मंत्री श्रीमती कमल रानी वरुण जी के असमय निधन की सूचना, व्यथित करने वाली है।
प्रदेश ने आज एक समर्पित जननेत्री को खो दिया।
उनके परिजनों के प्रति मेरी संवेदनाएं।
ईश्वर दिवंगत आत्मा को अपने श्री चरणों में स्थान प्रदान करें।
ॐ शांति!
— Yogi Adityanath (@myogiadityanath) August 2, 2020