uttarakhand-pauri-garhwal-bus-accident

ಡೆಹ್ರಾಡೂನ್: ಉತ್ತರಾಖಂಡದ ಪೌರಿ ಘರ್ವಾಲ್‌ ಜಿಲ್ಲೆಯಲ್ಲಿ ಮಂಗಳವಾರ ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ 500 ಮೀಟರ್ ಆಳದ ಕಮರಿಗೆ ಬಿದ್ದಿದೆ. ಕನಿಷ್ಠ 25 ಪ್ರಯಾಣಿಕರು ಸತ್ತಿದ್ದಾರೆ ಎಂದು ಶಂಕಿಸಲಾಗಿದೆ.

ಹರಿದ್ವಾರ ಜಿಲ್ಲೆಯ ಲಾಲ್‌ಧಾಂಗ್‌ನಿಂದ ಪೌರಿ ಘರ್ವಾಲ್‌ ಜಿಲ್ಲೆಯ ಬಿರ್ಖಾಲ್ ಬ್ಲಾಕ್‌ಗೆ ಮದುವೆಯ ದಿಬ್ಬಣದ ಬಸ್ ಸಾಗುತ್ತಿತ್ತು. ಕಮರಿಯ ಬದಿಯಲ್ಲಿ ಸಾಗುತ್ತಿದ್ದಾಗ ಹೆಚ್ಚಿನ ವೇಗದಿಂದಾಗಿ ನಿಯಂತ್ರಣ ತಪ್ಪಿ ಬಸ್ಸು ಕಮರಿಗೆ ಉರುಳಿಬಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡಗಳು ಧಾವಿಸಿದ್ದು, ಗ್ರಾಮದ ನಿವಾಸಿಗಳ ಸಹಾಯದ ಜೊತೆಗೆ ರಕ್ಷಣಾ ಕಾರ್ಯ ಮುಂದುವರೆದಿದೆ ಎಂದು ಮಾಹಿತಿ ತಿಳಿದು ಬಂದಿದೆ. ಇದುವರೆಗೆ 9 ಜನರನ್ನು ರಕ್ಷಿಸಲಾಗಿದೆ ಎಂದು ಉತ್ತರಾಖಂಡ ಪೊಲೀಸರಿಂದ ಮಾಹಿತಿ ತಿಳಿದುಬಂದಿದೆ.

ಇದನ್ನೂ  ಓದಿರಿ: ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇ-ಕೆವೈಸಿ ಮಾಡುವುದು ಹೇಗೆ ?

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮಂಗಳವಾರ ರಾಜ್ಯ ಸಚಿವಾಲಯದ ವಿಪತ್ತು ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದರು. “ನಾನು ಅಲ್ಲಿನ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ನಾವು ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಪ್ರಯತ್ನಿಸುತ್ತಿದ್ದೇವೆ. ಈಗಾಗಲೇ ತಂಡಗಳನ್ನು ನಿಯೋಜಿಸಲಾಗಿದ್ದು, ಸ್ಥಳೀಯರು ಸಹ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ” ಎಂದು ಧಾಮಿ ಹೇಳಿದರು.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here