ಕೇದಾರನಾಥ: ಕೇದಾರನಾಥ ದೇವಸ್ಥಾನಕ್ಕೆ ಯಾತ್ರಿಕರನ್ನು ಹೊತ್ತು ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು 7 ಮಂದಿ ಸಾವಿಗೀಡಾಗಿದ್ದಾರೆ. ಕೇದಾರನಾಥದ ಗರುಡಚಟ್ಟಿ ಬಳಿ ಈ ದುರಂತ ನಡೆದಿದೆ. ಹೆಲಿಕಾಪ್ಟರ್ನಲ್ಲಿದ್ದ 8 ಜನರ ಪೈಕಿ 7 ಮಂದಿ ಮೃತಪಟ್ಟಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
ಯಾತ್ರಿಕರನ್ನು ಹೊತ್ತ ಹೆಲಿಕಾಪ್ಟರ್ ಕೇದಾರನಾಥದಿಂದ ಫಾಟಾ ಹೆಲಿಪ್ಯಾಡ್‌ಗೆ ಹಾರುತ್ತಿತ್ತು. ಅಪಘಾತ ಸಂಭವಿಸಿದ ಕೂಡಲೇ ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಮತ್ತು ಸ್ಥಳೀಯ ಪೊಲೀಸರು ಅಪಘಾತ ಸ್ಥಳಕ್ಕೆ ಧಾವಿಸಿದರು.
ಇಲ್ಲಿಯವರೆಗೆ 6 ಮೃತದೇಹಗಳನ್ನು ಹೊರತೆಗೆಯಲಾಗಿದ್ದುರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಧಾಮಿ ತನಿಖೆಗೆ ಆದೇಶಿಸಿದ್ದಾರೆ. ಅಯಾನ್ ಏವಿಯೇಷನ್ ಪ್ರೈ.ಲಿ. ಲಿಮಿಟೆಡ್ ಎಂಬ ಖಾಸಗಿ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಇದಾಗಿದ್ದು ಇದು ಈ ಪ್ರದೇಶದಲ್ಲಿ ಹೆಲಿ ಸೇವೆಗಳನ್ನು ಒದಗಿಸುತ್ತದೆ.
ಕೇದಾರನಾಥದಲ್ಲಿ ಹೆಲಿಕಾಪ್ಟರ್ ಅಪಘಾತವು ಅತ್ಯಂತ ದುರದೃಷ್ಟಕರವಾಗಿದೆ. ನಾವು ರಾಜ್ಯ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ” ಎಂದು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಟ್ವೀಟ್ ಮಾಡಿದ್ದಾರೆ.