ಸ್ಯಾಂಡಲ್ ವುಡ್ ಜೋಡಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಇತ್ತೀಚಿಗೆ ಎಂಗೇಜ್ ಆಗಿದ್ದು, ಇದೀಗ ಮದುವೆಯ ದಿನಾಂಕವನ್ನೂ ನಿಗಧಿ ಮಾಡಿದ್ದಾರೆ. ತಮ್ಮ ಹಲವು ವರ್ಷಗಳ ಪ್ರೀತಿಗೆ ಮದುವೆಯ ರೂಪ ನೀಡಲು ತಯಾರಿ ನಡೆಸಿದ್ದಾರೆ.
ಇಂದು ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ್ದ ಸಿಂಹಪ್ರಿಯ ಜೋಡಿ ಗಣಪತಿ ಸಚ್ಚಿದಾನಂದ ಶ್ರೀಗಳಿಂದ ಆಶೀರ್ವಾದ ಪಡೆದು, ಮದುವೆ ಡೇಟ್ ಸಹ ಅನೌನ್ಸ್ ಮಾಡಿದ್ದಾರೆ.
ಸ್ಯಾಂಡಲ್ ವುಡ್ ಜೋಡಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಇದೇ ತಿಂಗಳು 26 ನೇ ತಾರೀಕಿನಂದು ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಮದುವೆಯಾಗಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿರಿ: ಹುಟ್ಟು ಹಬ್ಬದ ಸಂಭ್ರಮದಲ್ಲಿ ಕನ್ನಡತಿ ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ