Krishna G Rao: ‘KGF ತಾತ’ ಖ್ಯಾತಿಯ ತಾತ ಕೃಷ್ಣ ಜಿ ರಾವ್ ಇನ್ನಿಲ್ಲ

KGF Old Men krishna-ji-rao-no-more

ಬೆಂಗಳೂರು: ಕೇಜಿಫ್ ಚಿತ್ರದಲ್ಲಿ ತಾತನ ಪ್ರಮುಖ ಪಾತ್ರವೊಂದರಲ್ಲಿ ಮಿಂಚಿದ್ದ ಕೃಷ್ಣ ಜಿ ರಾವ್ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

‘ನಿಮಗೊಂದು ಸಲಹೇ ಕೊಡ್ತೀನಿ. ನೀವು ಮಾತ್ರ ಅವನಿಗೆ ಅಡ್ಡ ನಿಲ್ಲೋಕೆ ಹೋಗಬೇಡಿ ಸರ್.. ‘ ಕೆಜಿಎಫ್ ಸಿನಿಮಾ ನೋಡಿದವರಿಗೆ ಈ ಡೈಲಾಗ್ ಗೊತ್ತಿರುತ್ತದೆ. ತಾತ ಹೇಳಿರುವ ಈ ಡೈಲಾಗ್ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಕೆಜಿಎಫ್ ಪಾರ್ಟ್-1 ಮತ್ತು ಪಾರ್ಟ್-2ನ್ಲೂ ಕಾಣಿಸಿಕೊಂಡಿರುವ ನಟ ಕೃಷ್ಣ ಜಿ ರಾವ್ ಅವರು ಕೆಜಿಎಫ್ ತಾತ ಅಂತನೆ ಫೇಮಸ್ ಆಗಿದ್ದಾರೆ.

ಸಂಬಂಧಿಕರ ಮನೆಗೆ ತೆರಳಿದ್ದ ಅವರು, ಅನಾರೋಗ್ಯದ ಕಾರಣದಿಂದಾಗಿ ಕೂಡಲೇ ಆಸ್ಪತ್ರೆಗೆ ದಾಖಲಾಗಿದ್ದರು. ಶ್ವಾಸಕೋಶದ ಸೋಂಕು ಉಂಟಾಗಿದ್ದರಿಂದ ಅವರನ್ನು ಬೆಂಗಳೂರಿನ ಸೀತಾಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಯಲ್ಲಿ ತೀವ್ರ ನಿಗಾಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇದನ್ನೂ ಓದಿರಿ: ದೆಹಲಿಯಲ್ಲಿ ಕೇಜ್ರಿವಾಲ್ ಮ್ಯಾಜಿಕ್; 15 ವರ್ಷದ ಬಿಜೆಪಿ ಹಿಡಿತ ಅಂತ್ಯ

LEAVE A REPLY

Please enter your comment!
Please enter your name here