ಬೆಂಗಳೂರು (04): ಚಂದನವನದ ಮತ್ತೊಂದು ಕೊಂಡಿ ಇಂದು ಕಳಚಿದೆ. ಇಂದು ಹಿರಿಯ ನಟ ಎಸ್. ಶಿವರಾಮ್ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಶಿವರಾಮ್ ಅವರ ಕಾರ್ ಅಪಘಾತಕ್ಕೆ ಒಳಗಾಗಿತ್ತು, ನಂತರ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆಪಡೆದು ಮನೆಗೆ ತೆರಳಿದ್ದರು. ನಂತರ ಬುಧವಾರ ಅಯ್ಯಪ್ಪನ ಪೂಜೆ ಮಾಡಲು ಹೋಗಿ ಕೋಣೆಯಲ್ಲಿ ಜಾರಿ ಬಿದ್ದರು. ನಂತರ ಬೆಂಗಳೂರಿನ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಿದ್ದಾಗ ತಲೆಗೆ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿದಾಗ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಗಿತ್ತು. ಆದ್ರೆ ಶಿವರಾಮ್ ಅವರಿಗೆ 84 ವರ್ಷ ವಯಸ್ಸಾದ ಹಿನ್ನೆಲೆ ಸರ್ಜರಿ ಮಾಡಲು ಆಗಿರಲಿಲ್ಲ. ಐಸಿಯುನಲ್ಲೇ ವೆಂಟಿಲೇಟರ್ ಸಪೋರ್ಟ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಶಿವರಾಮ್ ಇಂದು ನಿಧನ ಹೊಂದಿದ್ದಾರೆ.
ಇದನ್ನೂ ಓದಿರಿ: ಪವರ್ ಸ್ಟಾರ್ ಪುನೀತ್ ರ ಹೊಸ ಚಿತ್ರದ ಪೋಸ್ಟರ್ ರಿಲೀಸ್ !