ಟಿ.ಎಸ್. ಲೋಹಿತಾಶ್ವ । veteran-kannada-actor-lohitashwa-passes-away

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರು ಮಂಗಳವಾರ ನಿಧನರಾಗಿದ್ದಾರೆ.

80 ವರ್ಷದ ಲೋಹಿತಾಶ್ವ ಅವರಿಗೆ ಇತ್ತೀಚಿಗೆ ತೀವ್ರ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್) ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.

ಇದನ್ನೂ ನೋಡಿರಿ: ಬ್ಲಾಕ್ ಡ್ರೆಸ್ ನಲ್ಲಿ ಕನ್ನಡದ ಜನಪ್ರೀಯ ನಟಿ ಆಶಿಕಾ ರಂಗನಾಥ್ ಮಿಂಚಿಂಗ್ !

ಅವತಾರ ಪುರುಷ, ಪೊಲೀಸ್ ಲಾಕಪ್, ಸ್ನೇಹಲೋಕ, ರೆಡಿಮೇಡ್ ಗಂಡ, ಸುಂದರಕಾಂಡ, ಸಿಂಹದ ಮರಿ, ಸಂಭವಾಮಿ ಯುಗೇ ಯುಗೇ, ಸಾರಥಿ ಸೇರಿದಂತೆ ಸಾಕಷ್ಟು ಜನಪ್ರಿಯ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here