ಚೆನ್ನೈ: ಸ್ವರ ಮಾಂತ್ರಿಕ ಎಸ್ ಪಿ ಬಾಲಬಾಲಸುಬ್ರಹ್ಮಣ್ಯಂ ಅವರು ಇಂದು ಮದ್ಯಾಹ್ನದ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಕಳೆದ 51 ದಿನಗಳಿಂದ ಚೆನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ಸೋಂಕಿಗೆ ತುತ್ತಾಗಿದ್ದ ಅವರು ಆಗಸ್ಟ್ 13 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ಆರೋಗ್ಯದಲ್ಲಿ ಗಂಭಿರ ಸಮಸ್ಯೆಗಳು ಉಂಟಾಗಿ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಯಾವುದೇ ರೀತಿಯ ದೊಡ್ಡ ಪ್ರಮಾಣದ ಚೇತರಿಕೆಗಳು ಕಂಡುಬಂದಿರಲಿಲ್ಲ. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.