vidyagama-programme-is-temporarily-closed-says-education-minister-suresh-kumar

ಬೆಂಗಳೂರು: ಕೊರೋನಾ ವೈರಸ್ ಮಕ್ಕಳು ಮತ್ತು ಶಿಕ್ಷಕರಲ್ಲಿ ವೇಗವಾಗಿ ಹರಡುತ್ತಿರುವ ಕಾರಣಗಳಿಂದಾಗಿ ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಕೇಳಿಬಂದ ಅಭಿಪ್ರಾಯದಿಂದಾಗಿ ತಾತ್ಕಾಲಿಕವಾಗಿ ಈ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ತಿಳಿಸಿದ್ದಾರೆ.

ಕೋವಿಡ್ -19 ರ ಸೋಂಕು ಹರಡುವ ಬೀತಿಯ ಹಿನ್ನೆಲೆಯಲ್ಲಿ ಶಾಲೆಗಳನ್ನು ತೆರೆಯಲು ಸಾಧ್ಯವಾಗದೆ ಇರುವುದರಿಂದ ಹಳ್ಳಿಗಳಲ್ಲಿ ಮಕ್ಕಳಿಗೆ ಶಿಕ್ಷಣ ದೊರೆಯಲಿ ಎನ್ನುವ ಕಾರಣಕ್ಕಾಗಿ ಈ ವಿದ್ಯಾಗಮ ಕಾರ್ಯಕ್ರಮವನ್ನು ಸರಕಾರ ಹಮ್ಮಿಕೊಂಡಿತು. ಆದರೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭದ ನಂತರ ಮಕ್ಕಳಲ್ಲಿ ಮತ್ತು ಶಿಕ್ಷಕರಲ್ಲಿ ಸೋಂಕು ಹರಡುವ ಪ್ರಮಾಣ ಹೆಚ್ಚಾಗಿದೆ ಎನ್ನುವ ಆರೋಪ ಕೇಳಿಬಂದಿತ್ತು.

ಈ ಯೋಜನೆಯಲ್ಲಿ ಸರಕಾರಿ ಶಾಲೆಗೆ ಸೇರಿದ 47 ಲಕ್ಷ ವಿದ್ಯಾರ್ಥಿಗಳು ಭಾಗಿಯಾಗಿದ್ದು, ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ. ಅತ್ಯಂತ ವೈಜ್ಞಾನಿಕವಾಗಿ ರೂಪಿಸಲ್ಪಟ್ಟ ಈ ಯೋಜನೆಯಿಂದ ಬಡ ಮಕ್ಕಳಿಗೆ, ಅವರ ಪರಿಪೂರ್ಣ ಬೆಳವಣಿಗೆಗೆ ಸಹಾಯಕವಾಗಿದೆ. ಈ ಯೋಜನೆಯು ದೇಶದಲ್ಲಿಯೇ ಮಾದರಿಯಾಗಿ ಗುರುತಿಸಿಕೊಂಡಿದ್ದು, ಇದರ ಪ್ರಯೋಜನ ಮತ್ತು ಸುರಕ್ಷತೆಯ ಕುರಿತಾಗಿ ಯಾರೂ ಸಂಶಯ ಪಡುವ ಅಗತ್ಯವಿಲ್ಲ. ಆದರೂ ಸೋಂಕು ಶಿಕ್ಷಕರ ಮೂಲಕ ಮಕ್ಕಳಿಗೆ ಮತ್ತು ಮಕ್ಕಳಿಂದ ಶಿಕ್ಷಕರು ಹರಡುತ್ತಿದೆಯೇ ಎನ್ನುವ ವಿಚಾರವಾಗಿ ಕೂಲಂಕುಷವಾಗಿ ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸುರೇಶ ಕುಮಾರ್ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here