ಇಂದು ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಬ್ಬರದ ತನ್ನ 73ನೆಯ ಶತಕವನ್ನು ಬಾರಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 73 ಶತಕಗಳನ್ನು ಬಾರಿಸಿ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.
ಸಚಿನ್ ಈ ಸಾಧನೆಯನ್ನು 164 ಪಂದ್ಯಗಳಲ್ಲಿ ಸಾಧಿಸಿದ್ದರೆ, ವಿರಾಟ್ ಕೊಹ್ಲಿ 101 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇಂದಿನ ಶತಕದಿಂದ ವಿರಾಟ್ ಕೊಹ್ಲಿ ಅವರ ಏಕದಿನ ಕ್ರಿಕೆಟ್ ನಲ್ಲಿ 45 ಶತಕ ಪೂರ್ಣಗೊಂಡಿದೆ. ಸಚಿನ್ ತೆಂಡೂಲ್ಕರ್ ಏಕದಿನ ಪಂದ್ಯದಲ್ಲಿ 49 ಶತಕಗಳ ದಾಖಲೆಯನ್ನು ಹೊಂದಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಸಚಿನ್ ಹೆಸರಿನಲ್ಲಿರುವ ಈ ದಾಖಲೆಯನ್ನೂ ಸರಿಗಟ್ಟಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿರಿ: ಭಾರತೀಯ ಸೇನೆ ವಿರುದ್ಧ ಟ್ವೀಟ್: ಶೆಹ್ಲಾ ರಶೀದ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ