winter-session-in-parliament-amid-sloganeering-by-opposition-in-lok-sabha-narendra-singh-tomar-tables-the-farm-laws-repeal-bill-2021

ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಕೃಷಿ ಕಾನೂನುಗಳ ರದ್ದತಿ ಮಸೂದೆ 2021 (Farm Laws Repeal Bill 2021) ಮಂಡಿಸಿದರು. ಸದನದಲ್ಲಿ ಮಸೂದೆಯನ್ನು ಚರ್ಚಿಸಬೇಕೆಂದು ಕಾಂಗ್ರೆಸ್, ಟಿಎಂಸಿ, ತೃಣಮೂಲ ಕಾಂಗ್ರೆಸ್ ಪಟ್ಟುಹಿಡಿದು ಗದ್ದಲ ಮಾಡಿದವು.

ಇಂದು ಕೃಷಿ ಕಾನೂನುಗಳ ರದ್ದತಿ ಮಸೂದೆ (Farm Laws Repeal Bill 2021) ಯನ್ನು ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಅಂಗೀಕರಿಸಲಾಗಿದೆ. 2021 ರ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಅಂಗೀಕರಿಸುವ ಮೊದಲು ಯಾವುದೇ ಚರ್ಚೆಗೆ ಅವಕಾಶ ಮಾಡಿಕೊಡಲು ಸ್ಪೀಕರ್ ಓಂ ಬಿರ್ಲಾ ಅವರು ವಿರೋಧ ಪಕ್ಷದ ಸಂಸದರಿಗೆ ಮನವಿ ಮಾಡಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷಗಳು, ಸರಕಾರ ರೈತರ ಪರಿಸ್ಥಿತಿಯನ್ನು ಚರ್ಚಿಸಲು ಹೆದರುತ್ತಿದೆ, ರೈತರ ಪರವಾಗಿ ಮಾತನಾಡುವ ಪ್ರತಿಪಕ್ಷಗಳನ್ನು ತಡೆಯಲಾಗುತ್ತಿದೆ ಎಂದು ಹೇಳಿದರು.

ಮಸೂದೆ ಅಂಗೀಕಾರಗೊಳ್ಳುತ್ತಿದ್ದಂತೆಯೇ ಲೋಕಸಭೆಯ ಕಲಾಪವನ್ನು ಎರಡನೇ ಬಾರಿಗೆ ಮಧ್ಯಾಹ್ನ 2:00 ಗಂಟೆಗೆ ಮುಂದೂಡಲಾಯಿತು. ಪ್ರತಿಪಕ್ಷಗಳ ಗದ್ದಲ, ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಷ್ಟೇ ಪ್ರತಿಪಕ್ಷಗಳ ಪ್ರಮುಖ ಬೇಡಿಕೆಯಾಗಿತ್ತು. ಈಗ ಹಿಂಪಡೆಯಲಾಗಿದ್ದರೂ ಗದ್ದಲ ನಡೆಸುವುದೇಕೆ? ಎಂದು ಪ್ರಶ್ನಿಸಿದ್ದಾರೆ.

ಇನ್ನು ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ (Rahul Gandhi) ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯಲಿದೆ ಎಂದು ಈ ಹಿಂದೆಯೇ ನಾನು ಹೇಳಿದ್ದೆ. ಅದೇ ರೀತಿ ಕಾಯ್ದೆಯನ್ನು ರದ್ದುಪಡಿಸಿದೆ. ಆದರೆ, ಚರ್ಚೆಯಿಲ್ಲದೆ ಕಾಯ್ದೆ ಹಿಂಪಡೆದುಕೊಂಡಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ನಿರ್ಧಾರಗಳನ್ನು ತೆಗೆದುಕೊಂಡಿರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: Jacqueline Fernandez: ಖಾಸಗಿ ಕಿಸ್ಸಿಂಗ್ ಫೋಟೋ ಲೀಕ್, ಕೆನ್ನೆಗೆ ಮುತ್ತುಕೊಟ್ಟ ಕರ್ನಾಟಕದ ಕಳ್ಳ !

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here